ಬುದಗೊಪ್ಪ ಗ್ರಾಮದಲ್ಲಿ ರೈತ ಕ್ಷೇತ್ರ ಪಾಠಶಾಲೆ
Farmers' Field School in Budagoppa village
ಲೋಕದರ್ಶನ ವರದಿ
ನೇಸರಗಿ 06 : ರಾಮದುರ್ಗ ತಾಲ್ಲೂಕಿನ ಬುದಗೊಪ್ಪ ಗ್ರಾಮದಲ್ಲಿ ಕೃಷಿ ಇಲಾಖೆ (ಆತ್ಮ) ಸಹಯೋಗದಲ್ಲಿ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಎಸ್. ಎಂ. ವಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತೊಗರಿ ಬೆಳೆಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆ ಕುರಿತು ರೈತರಿಗೆ ಹಾಗೂ ಕೃಷಿ ಮಹಿಳೆಯರಿಗೆ ಮಾಹಿತಿ ನೀಡಿದರು.
ಈ ಭಾಗದ ಮಣ್ಣಿನ ಫಲವತ್ತತೆ ಕಡಿಮೆಯಾಗಿರುವುದರಿಂದ ತೊಗರಿ ಬೆಳೆಯ ಇಳುವರಿ ಕುಂಠಿತವಾಗುತ್ತಿದೆ ಎಂದು ಅವರು ತಿಳಿಸಿದರು. ಮಣ್ಣಿನ ಉತ್ಪಾದಕತೆ ಹೆಚ್ಚಿಸಲು ಪ್ರತಿ ಹೆಕ್ಟೇರ್ಗೆ ಸುಮಾರು 2.4 ಟನ್ ಕಾಂಪೋಸ್ಟ್ ಬಳಕೆ ಮಾಡುವಂತೆ ಸಲಹೆ ನೀಡಿದರು. ಸಾವಯವ ಗೊಬ್ಬರ ಬಳಕೆಯಿಂದ ಮಣ್ಣಿನಲ್ಲಿ ಪೋಷಕಾಂಶಗಳ ಲಭ್ಯತೆ ಹೆಚ್ಚುವುದರೊಂದಿಗೆ ಬೆಳೆಯ ಬೆಳವಣಿಗೆ ಹಾಗೂ ಇಳುವರಿ ಉತ್ತಮವಾಗುತ್ತದೆ ಎಂದರು.
ಬಿತ್ತನೆಗೂ ಮುನ್ನ ಪ್ರತಿ ಎಕರೆಗೆ ಅಗತ್ಯವಿರುವ ಬೀಜಗಳನ್ನು 200 ಗ್ರಾಂ ರೈಜೋಬಿಯಂ ಹಾಗೂ 200 ಗ್ರಾಂ ಫಾಸ್ಫೇಟ್ ಕರಗಿಸುವ ಬ್ಯಾಕ್ಟೀರಿಯಾ (ಕಖಃ) ಯೊಂದಿಗೆ ಬೀಜೋಪಚಾರ ಮಾಡುವಂತೆ ಸೂಚಿಸಿದರು. ಮಣ್ಣಿನ ಪರೀಕ್ಷಾ ವರದಿಯ ಆಧಾರದ ಮೇಲೆ ಸಾರಜನಕ, ರಂಜಕ ಮತ್ತು ಪೊಟ್ಯಾಶ್ ಸೇರಿದಂತೆ ಅಗತ್ಯ ಪೋಷಕಾಂಶಗಳನ್ನು ಸಮರ್ಕವಾಗಿ ಒದಗಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕ ಶ್ರೀನಾಥ ಚಿಮ್ಮಲಗಿ, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಎ. ಬಿ. ವಾಲೀಕರ, ಕೆ. ಚಂದರಗಿ, ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ಸವಿತಾ ಚೌರಡ್ಡಿ ಹಾಗೂ ಪ್ರಗತಿಪರ ರೈತ ಜಗತಾಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 