ಬೆಳೆ ವಿಮೆ ನೋಂದಣಿ ಗೊಂದಲ ನಿವಾರಣೆಗೆ ರೈತ ಸಂಘ ಆಗ್ರಹ
Farmers' association urges resolution of crop insurance registration confusion
ಬ್ಯಾಡಗಿ, ಜು.10: ಜಿಲ್ಲೆಯಲ್ಲಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣ ದ್ವಂದ್ವಗಳನ್ನು ನಿವಾರಿಸಿ ಸರಳವಾದ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ರೈತ ಸಂಘ ಆಗ್ರಹಿಸಿದೆ.
ತಾಲೂಕಿನ ಮೊಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಸಮೀಪ ಪ್ರತಿಭಟನೆ ನಡೆಸಿದ ರೈತ ಸಂಘದ ಪದಾಧಿಕಾರಿಗಳು, ರಾಜ್ಯ ಕೃಷಿ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಕಳೆದ ಕೆಲವು ವರ್ಷಗಳಿಂದ ಸಮರ್ಕ ಮಳೆಯ ಕೊರತೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದು, ಈ ವರ್ಷವೂ ಮಳೆ ಅಭಾವದಿಂದ ಬೆಳೆ ನಷ್ಟದ ಆತಂಕ ಎದುರಾಗಿದೆ ಎಂದು ಹೇಳಿದರು.
ಬೆಳೆ ವಿಮೆ ನೋಂದಣಿಯಲ್ಲಿ ಸಾಲಗಾರರು ಮತ್ತು ಸಾಲೇತರ ರೈತರ ವರ್ಗೀಕರಣ, ಸ್ವಯಂ ದೃಢೀಕರಣ ಸೇರಿದಂತೆ ಹಲವು ತಾಂತ್ರಿಕ ಸಮಸ್ಯೆಗಳು ರೈತರಲ್ಲಿ ಗೊಂದಲ ಉಂಟುಮಾಡಿವೆ. ಇದರಿಂದ ಅನೇಕ ರೈತರು ವಿಮೆ ವ್ಯಾಪ್ತಿಯಿಂದ ಹೊರಗುಳಿಯುವ ಸಾಧ್ಯತೆ ಇದ್ದು, ಸರ್ಕಾರ ಕೂಡಲೇ ಸಮಸ್ಯೆ ಪರಿಹರಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಕೃಷಿ ನಿರ್ದೇಶಕ ಡಾ. ಪುತ್ರ, ಕೃಷಿ ಆಯುಕ್ತ ಡಾ. ಸತೀಶ್ ಹಾಗೂ ರೈತ ಸಂಘದ ಪದಾಧಿಕಾರಿಗಳಾದ ಮರುಗೌಡ ಪಾಟೀಲ, ಶಿವಯೋಗಿ ಹೊಸಗೌಡ್ರ, ಗುಡ್ಡನಗೌಡ ಪಾಟೀಲಗೌಡ್ರ, ರುದ್ರ್ಪ ಅಣ್ಣಿ, ಸುಭಾಷ್ ಬನ್ನಿಹಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 