ಇಂಡಿ ತಾಲೂಕು ಬರಪೀಡಿತ ಪ್ರದೇಶ ಘೋಷಣೆಗೆ ರೈತರ ಆಗ್ರಹ
Farmers' demand for declaration of Indi taluk drought prone area
ಇಂಡಿ ಸೆ.9: ಇಂಡಿ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತ ಸಂಘ, ಸಂಯುಕ್ತ ಕರ್ನಾಟಕ ಹೋರಾಟ ಸಮಿತಿ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಬಸವೇಶ್ವರ ವೃತ್ತದಲ್ಲಿ ಸಾವಿರಾರು ರೈತರು ಹಾಗೂ ಮಹಿಳೆಯರು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಾಲೂಕು ಆಡಳಿತಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮಾಜಿ ಶಾಸಕ ರವಿಕಾಂತ ಪಾಟೀಲ ಮಾತನಾಡಿ, ಮಳೆ ಕೊರತೆಯಿಂದ ಬೆಳೆಗಳು ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು. ಬೆಳೆ ನಷ್ಟದ ಸಮೀಕ್ಷೆಯನ್ನು ತ್ವರಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಿ ರೈತರಿಗೆ ಸೂಕ್ತ ಬೆಳೆ ಪರಿಹಾರ ನೀಡಬೇಕು ಎಂದರು.
ಹಸಿರು ಸೇನೆ ರೈತ ಸಂಘದ ಜಿಲ್ಲಾಧ್ಯಕ್ಷ ಎಸ್.ಬಿ. ಕೆಂಬೋಗಿ ಮಾತನಾಡಿ, ಮೇವು ಮತ್ತು ನೀರಿನ ಕೊರತೆ ಎದುರಿಸುತ್ತಿರುವ ಗ್ರಾಮಗಳಿಗೆ ಅಧಿಕಾರಿಗಳು ತಕ್ಷಣ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರಿಗೆ ಕುಡಿಯುವ ನೀರು ಹಾಗೂ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ವಿದ್ಯುತ್ ಪೂರೈಕೆ ಸಮರ್ಕವಾಗಿ ಒದಗಿಸಬೇಕು ಎಂದು ಆಗ್ರಹಿಸಿದರು.
ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರುನಾಥ ಬಗಲಿ ಮಾತನಾಡಿ, ಬರದಿಂದ ಹಾನಿಗೊಳಗಾದ ರೈತರಿಗೆ ಬೆಳೆ ಪರಿಹಾರ, ಬೆಳೆ ವಿಮೆ ಹಾಗೂ ಸರ್ಕಾರದ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು. ಕೃಷಿ ಸಾಲದ ಬಡ್ಡಿ ಹಾಗೂ ಮರುಪಾವತಿ ಕುರಿತು ಪರಿಹಾರಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೆಆರ್ಎಸ್ ಪಕ್ಷದ ಜಿಲ್ಲಾಧ್ಯಕ್ಷ ಶಿವಾನಂದ ಯಡಹಳ್ಳಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಹಾಗೂ ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿ.ಡಿ. ಪಾಟೀಲ, ಶಂಕರಗೌಡ ಪಾಟೀಲ, ಹನುಮಂತರಗೌಡ ಪಾಟೀಲ, ಶಂಕರಗೌಡ ಬಿರಾದಾರ, ಅನಿಲ್ ಗೌಡ ಬಿರಾದಾರ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಾವಿರಾರು ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 