5ನೇ ದಿನಕ್ಕೆ ಕಾಲಿಟ್ಟ ರೈತರ ಅನಿರ್ದಿಷ್ಟಾವಧಿ ಧರಣಿ
Farmers' indefinite protest enters fifth day
ತಾಳಿಕೋಟಿ 07 : ದೇವರ ಹಿಪ್ಪರಗಿ ತಾಳಿಕೋಟಿ ಮುದ್ದೇಬಿಹಾಳ ತಾಲೂಕುಗಳನ್ನು ಸಂಪೂರ್ಣ ಬರಗಾಲವೆಂದು ಘೋಷಿಸಿ ರೈತರಿಗೆ ಶೀಘ್ರವೇ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ತಾಲೂಕ ಘಟಕದ ನೇತೃತ್ವದಲ್ಲಿ ಪ್ರವಾಸಿ ಮಂದಿರದ ಹತ್ತಿರ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ರವಿವಾರ ನಾಲ್ಕನೇ ದಿನ ಪೂರೈಸಿ 5 ದಿನಕ್ಕೆ ಪಾದಾರೆ್ಣ ಮಾಡಿತು. ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಅವರು ಮಾತನಾಡಿ ಬರಗಾಲದಿಂದ ಇಡೀ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಲು ನೀರೀಕ್ಷಿಸಿದ ಮಟ್ಟದಲ್ಲಿ ಪ್ರಯತ್ನಿಸುತ್ತಿಲ್ಲ, ಐದು ದಿನ ಕಳೆಯುತ್ತಿದ್ದರು ಇಲ್ಲಿವರೆಗೆ ಬಂದು ರೈತರನ್ನು ಮಾತನಾಡಿಸಿಲ್ಲ. ಮಂತ್ರಿ ಸ್ಥಾನ ಸಿಗದೇ ಇದ್ದಾಗ ರಾಜೀನಾಮೆ ನೀಡುವ ಜನಪ್ರತಿನಿಧಿಗಳು ರೈತರ ಈ ಸಂಕಷ್ಟದ ಸಂದರ್ಭದಲ್ಲಿ ಅವರಿಗಾಗಿ ರಾಜೀನಾಮೆ ನೀಡುವುದಿಲ್ಲ. ರೈತ ಸಂಘದ ತಾಲೂಕ ಘಟಕದ ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ತಾಳಿಕೋಟಿ ತಾಲೂಕ ಘಟಕದ ಅಧ್ಯಕ್ಷ ಬಾಳಪ್ಪಗೌಡ ಲಿಂಗದಳ್ಳಿ, ಮಡಿವಾಳಪ್ಪ ಕಲಬುರ್ಗಿ, ಶ್ರೀನಿವಾಸ ಗೊಟಗುಣಕಿ,ರಾಮನಗೌಡ ಬಿರಾದಾರ, ಮಲ್ಲನಗೌಡ ಟಕ್ಕಳಕಿ, ಹಣಮಂತರಾಯಾ ಮುದನೂರ, ಬಸವರಾಜ ಶಿರೂರ ಸೇರಿದಂತೆ ಹಲವಾರು ರೈತರು ಭಾಗಿಯಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 