ಜಮಖಂಡಿ ತಾಲೂಕ ಸೌಧದ ಆವರಣದ ಮುಂದೆ ರೈತ ಸಂಘಟನೆಯಿಂದ ಪ್ರತಿಭಟನೆ
Farmers' organization stages protest in front of the Jamkhandi Taluk Office premises
ಲೋಕದರ್ಶನ ವರದಿ
ಜಮಖಂಡಿ 26 : ರಾಜ್ಯದಲ್ಲಿ ನಿಗದಿತ ಪ್ರಮಾಣದ ಮಳೆಯಾಗದೇ ಬರಗಾಲ ಎದುರಾಗಿದೆ. ಮುಂಗಾರು ಬೆಳೆಗಳು ಒಣಗಿ ಹೋಗಿವೆ. ಇದರಿಂದ ರೈತಾಪಿ ವರ್ಗ ಕಂಗಾಲಾಗಿದ್ದು ರೈತರ ಬೆಳೆ ಸಾಲ ಮನ್ನಾ ಮಾಡಬೇಕು ಅಲ್ಲದೇ ಮುಂಗಾರು ಬೆಳೆಗಳ ಪರಿಹಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿ ರೈತಸಂಘಟೆಯವರು ಪ್ರತಿಭಟನೆ ನಡೆಸಿದರು.
ನಗರದ ತಾಲೂಕ ಸೌಧದ ಕಚೇರಿ ಆವರಣದ ಮುಂದೆ ಕೆಲಕಾಲ ಘೋಷಣೆಯನ್ನು ಕೂಗುತ್ತಾ ತಮ್ಮ ಬೇಡಿಕೆಯನ್ನು ಸರಕಾರ ಈಡೇರಿಸಬೇಕೆಂದು ಪ್ರತಿಭಟನೆ ನಡೆಸಿದ ಅವರು, ಮುಂಗಾರು ಮಳೆ ಬರದ ಕಾರಣ ಬರಗಾಲದ ಛಾಯೆ ಆವರಿಸಿದೆ. ಅಂತರ್ಜಲ ಮಟ್ಟ ಕುಸಿದು ಹೋಗಿದ್ದು ಬೋರ್ವೆಲ್ಗಳಿಂದ ನೀರಾವರಿ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಕೃರ್ತಿ ವಿಕೋಪದಿಂದ ರೈತರು ಕಂಗಾಲಾಗಿದ್ದು ಸರ್ಕಾರ ರೈತರ ಸಹಾಯಕ್ಕೆ ಮುಂದಾಗಬೇಕು ಎಂದರು.
ಮಳೆಗಾಲ ಪ್ರಾರಂಭವಾಗುತ್ತದೆ ಎಂಬ ನಂಬಿಕೆಯಿಂದ ರೈತರು ಮುಂಗಾರು ಬೆಳೆಗಳ ಬಿತ್ತನೆ ಮಾಡಿದ್ದರು ಸಧ್ಯ ಮಳೆ ಇಲ್ಲದ ಕಾರಣ ಬೆಳೆಗಳೆಲ್ಲ ಒಣಗಿ ಹೋಗಿದೆ. ರೈತರ ಬೆಳೆಸಾಲ ಮನ್ನಾ ಮಾಡುವ ಮೂಲಕ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಸರ್ಕಾರ ಸ್ಪಂಧಿಸಬೇಕು, ಮುಂಗಾರು ಬೆಳಗಳ ಬಿತ್ತನೆಗೆ ರೈತರು ಸಾಕಷ್ಟು ಕರ್ಚು ಮಾಡಿಕೊಂಡಿದ್ದು ಬೆಳೆ ಪರಿಹಾರ ಒದಗಿಸಿಕೊಡಬೇಕು. ಸಂಕಷ್ಟದಲ್ಲಿರುವ ರೈತಾಪಿ ವರ್ಗಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಬೆಂಬಲವಾಗಿ ನಿಲ್ಲಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸಿದರು.
ರೈತಮುಖಂಡರಾದ ಶ್ರೀಶೈಲ ಭೂಮಾರ, ರಾಜು ನದಾಫ, ಹಣಮಂತ ಮಗದುಮ, ಬಾಹುಬಲಿ ನ್ಯಾಮಗೌಡ, ಕಲ್ಲಪ್ಪ ಬಿರಾದಾರ, ಕಲೂತಿ, ಸಿದ್ದುಗೌಡ ಪಾಟೀಲ , ಡಾ. ಅಜಯ ಕುಲಕರ್ಣಿ, ಶ್ರೀಶೈಲ ಮೈಗೂರ, ಪ್ರಸನ್ನ ಜಮಖಂಡಿ. ಧರೆಪ್ಪ ದಾನಗೌಡ, ಸುರೇಶ ಹಂಚಿನಾಳ, ಸೇರಿದಂತೆ ಅಥಣಿ, ಬಬಲೇಶ್ವರ ತಾಲೂಕಿನ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 