ರೈತರ ಪ್ರತಿಭಟನೆ ಫಲ: ಕಾಲುವೆಗೆ ಮತ್ತೆ ನೀರು, ಬೆಳೆಗಳಲ್ಲಿ ಹೊಸ ಚೈತನ್ಯ
Farmers' protest bears fruit: Water flows into the canal again, crops show renewed vigor
ಸಂಬರಗಿ, ಜುಲೈ 19: ರೈತರ ನಿರಂತರ ಪ್ರತಿಭಟನೆ ಮತ್ತು ಮನವಿಯ ಫಲವಾಗಿ ಅಧಿಕಾರಿಗಳು ಬರಪೀಡಿತ ಗ್ರಾಮಗಳಿಗೆ ಕಾಲುವೆ ನೀರನ್ನು ಮತ್ತೆ ಹರಿಸಲು ಕ್ರಮ ಕೈಗೊಂಡಿದ್ದಾರೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಒಣಗುವ ಹಂತದಲ್ಲಿದ್ದ ಬೆಳೆಗಳಿಗೆ ಹೊಸ ಜೀವ ಬಂದಿದೆ.
ಶಾಸಕ ರಾಜು ಕಾಗೆ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರ ಪ್ರಯತ್ನದ ಫಲವಾಗಿ ಖಿಳೆಗಾಂವ ಬಸವೇಶ್ವರ ಎತ ನೀರಾವರಿ ಯೋಜನೆಯ ಮುಖ್ಯ ಕಾಲುವೆಯಿಂದ ನೀರನ್ನು ಅರಳಹಟ್ಟಿ ಗ್ರಾಮದವರೆಗೆ ಹರಿಸಲಾಗಿದೆ. ನೀರು ತಲುಪಿದ ಹಿನ್ನೆಲೆಯಲ್ಲಿ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುವವರೆಗೆ ಕಾಲುವೆಗೆ ನೀರು ಹರಿಸುವಂತೆ ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದ ಮುಂಗಾರು ಹಂಗಾಮಿನ ಬೆಳೆಗಳನ್ನು ರಕ್ಷಿಸಬಹುದೆಂಬ ವಿಶ್ವಾಸ ವ್ಯಕ್ತವಾಗಿದೆ.
ಮಹಾರಾಷ್ಟ್ರದ ಕೊಯ್ನಾ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ನದಿಗಳಲ್ಲಿ ನೀರಿನ ಹರಿವು ಇಳಿಮುಖವಾಗಿದೆ. ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನೀರು ಸರಬರಾಜನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಆದರೆ ರೈತರ ಪ್ರತಿಭಟನೆ ಹಾಗೂ ಜನಪ್ರತಿನಿಧಿಗಳ ಮಧ್ಯಸ್ಥಿಕೆಯಿಂದ ಇದೀಗ ಮತ್ತೆ ಕಾಲುವೆಗೆ ನೀರು ಹರಿಸಲಾಗುತ್ತಿದೆ. ನೀರಿನ ಲಭ್ಯತೆಯಿಂದ ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಪುನರಾರಂಭಿಸಿದ್ದು, ಬೆಳೆಗಳನ್ನು ಉಳಿಸಿಕೊಳ್ಳುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ಮದಭಾವಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳ ರೈತರು ಕೂಡ ಮುಖ್ಯ ಕಾಲುವೆಯಿಂದ ಸಮರ್ಕ ಪ್ರಮಾಣದಲ್ಲಿ ನೀರು ಹರಿಸಿ, ಉಪ ಕಾಲುವೆಗಳಿಗೂ ನೀರು ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಮುಖ್ಯ ಕಾಲುವೆಯಲ್ಲಿ ನೀರು ಹರಿದರೂ ಉಪ ಕಾಲುವೆಗಳಿಗೆ ಸಮರ್ಕವಾಗಿ ನೀರು ತಲುಪದ ಕಾರಣ ಕೆಲ ಗ್ರಾಮಗಳ ರೈತರು ಇನ್ನೂ ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 