ಹಿಂಸಾರೂಪ ಪಡೆದ ಕಬ್ಬಿನ ಬೆಲೆ ನಿಗದಿಗಾಗಿ ನಡೆದ ರೈತರ ಪ್ರತಿಭಟನೆ
Farmers' protest turns violent
ಲೋಕದರ್ಶನ ವರದಿ
ಜಮಖಂಡಿ 14: ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿಪಡಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ ಹಿಂಸಾರೂಪ ಪಡೆದಿದೆ.
ಮಹಾಲಿಂಗುಪುರ ಬಳಿಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಕಬ್ಬು ತುಂಬಿಕೊಂಡು ನಿಂತಿದ್ದ 80ಕ್ಕೂ ಅಧಿಕ ಟ್ರ್ಯಾಕ್ಟರ್‌ಗಳು ಹಾಗೂ ಹಲವು ಬೈಕ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಲಾಗಿದ್ದು. ಇದರ ಪರಿಣಾಮ ರಾತ್ರಿಯವರೆಗೆ ಆತಂಕದ ವಾತಾವರಣ ನಿರ್ಮಾಣವಾಯಿತು.
ಮುಧೋಳ ಬಂದ್‌ಗೆ ಕರೆ ನೀಡಿದ ಹಿನ್ನಲೆ ಸ್ಥಳೀಯ ವ್ಯಾಪಾರಿಗಳು ಬೆಂಬಲ ಸೂಚಿಸಿದ್ದರಿಂದ ಬಂದ್ ಯಶಸ್ವಿಯಾಗಿತು. ಬೆಳಿಗ್ಗೆ 11 ಗಂಟೆಗೆ ಸಂಗೊಳ್ಳಿ ರಾಯಣ್ಣ ವೃತ್ತದ ವೇದಿಕೆಯಲ್ಲಿ ರೈತ ಮುಖಂಡರು ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅತ್ತ ಸಮೀರವಾಡಿ ಸಕ್ಕರೆ ಕಾರ್ಖಾನೆಯಲ್ಲಿ ಬೆಳಿಗ್ಗೆ ಪೂಜೆ ಸಲ್ಲಿಸಿ ಕಬ್ಬು ನುರಿಸುವ ಪ್ರಕ್ರಿಯೆ ಆರಂಭಿಸಿದ್ದು ತಿಳಿಯುತ್ತಿದ್ದಂತೆಯೇ ರೈತ ಮುಖಂಡರು ಕಾರ್ಖಾನೆಗೆ ಮುತ್ತಿಗೆ ಹಾಕಲು ಕರೆ ನೀಡಿದರು. ಕೆಲ ಹೊತ್ತಲ್ಲೇ ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದರು.
ಕಬ್ಬು ಸಹಿತ ಕೆಲ ಟ್ರ್ಯಾಕ್ಟರ್‌ಗಳು ಬೆಂಕಿಗೆ ಆಹುತಿಯಾದವು. ಕಾರ್ಖಾನೆ ಬಳಿ ನಡೆದ ಕಲ್ಲು ತೂರಾಟದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ್ವರ ಜಿದ್ದಿ, ಸೇರಿ ಹಲವರಿಗೆ ಗಾಯಗಳಾಗಿದ್ದು. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.
ಈ ಕುರಿತು ಜಿಲ್ಲಾಧಿಕಾರಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತೆಗಾಗಿ ಜಮಖಂಡಿ, ಮುಧೋಳ, ರಬಕವಿ-ಬನಹಟ್ಟಿ ತಾಲೂಕಗಳಾದ್ಯಂತ ಪ್ರತಿಭಟನೆ, ಮುಸ್ಕರ, ಗುಂಪು ಸೇರುವಿಕೆಯನ್ನು ನಿಷೇದಿಸಿ ಗುರುವಾರ ರಾತ್ರಿ 8 ರಿಂದ 16 ರವಗೆ ಬೆಳಗ್ಗೆ 8 ರವಗೆ ನಿಷೇದಾಜ್ಞಾನೆಯನ್ನು ಜಾರಿಗೊಳಿಸಿದ್ದಾರೆ.

ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 