ಶಾಲಾ ಕಟ್ಟಡ ನಿಮರ್ಾಣ ತೆರವುಗೊಳಿಸುವಂತೆ ರೈತರ ಮನವಿ
ರಾಣೇಬೆನ್ನೂರು21: ತಾಲೂಕಿನ ಹೂಲಿಹಳ್ಳಿ ಗ್ರಾಮದ ಹತ್ತಿರ ಅನಧಿಕೃತವಾಗಿ ನಿಮರ್ಿಸಿರುವ ಶಾಲಾ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ, ತಾಲೂಕಾ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ ಕೆ.ಎಸ್.ವಡ್ಡನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ತಾಲೂಕಿನ ಅಸುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹೂಲಿಹಳ್ಳಿ ಗ್ರಾಮದ ಜಾಗೆಯಲ್ಲಿ ಅನಧಿಕೃತವಾಗಿ ಮದರಸಾ ಶಾಲಾ ಕಟ್ಟಡವನ್ನು ನಿಮರ್ಾಣ ಮಾಡಲಾಗುತ್ತಿದೆ.
ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದರೂ ಇದುವರೆಗೂ ಯಾವುದೇ ಪ್ರಯೋಜನೆಯಾಗಿಲ್ಲ ಎಂದು ದೂರಿದರು.
ಜೂ.4ರ ಒಳಗಾಗಿ ಸೂಕ್ತ ಕ್ರಮ ಜರುಗಿಸದೇ ಇದ್ದಲ್ಲಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ, ಅಲ್ಲದೆ ತಹಸೀಲ್ದಾರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಶಿವಶಂಕರ ಬಾಕರ್ಿ, ನ್ಯಾಯವಾದಿ ಮೃತ್ಯುಂಜಯ ಗುದಿಗೇರ, ಸುರೇಶ ಗುತ್ತಲ, ಆನಂದ ಹುಲ್ಬನಿ, ರೇವಪ್ಪ ಲಮಾಣಿ, ಪರಮೇಶಪ್ಪ ಅರಳಿಕಟ್ಟಿ, ಕಿರಣ ಗುಳೇದ, ಕರಿಯಪ್ಪ ಮೈಲಾರ, ಶಂಕರಪ್ಪ ಕುರುಬರ ಸೇರಿದಂತೆ ಮತ್ತಿತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 