ರೈತರಿಗೆ ಪರಿಹಾರ ನೀಡಲು ರೈತ ಸಂಘದ ಆಗ್ರಹ
Farmers' union demands compensation for farmers
ಲೋಕದರ್ಶನ ವರದಿ
ಹೂವಿನಹಡಗಲಿ 30- ತಾಲೂಕು ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಕೈಕೊಟ್ಟ ಕಾರಣ ಬಿತ್ತಿದ ಬೆಳೆ ಒಣಗುತ್ತಿವೆ. ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೂವಿನಹಡಗಲಿ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಪರಿಹಾರ ನೀಡುವಂತೆ ರೈತ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು. ಹೂವಿನಹಡಗಲಿ ರೈತ ಸಂಘದ ಹೋರಾಟ ಸಮಿತಿಯ ಸದಸ್ಯರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ರೈತ ಸಂಘದ ತಾಲೂಕು ಅಧ್ಯಕ್ಷ ಹೊಸಮನಿ ಸಿದ್ದಪ್ಪ ಮಾತನಾಡಿ, ಮಳೆಯ ಕೊರತೆಯಿಂದ ಸಾಲಮಾಡಿ ಬಿತ್ತನೆ ಮಾಡಿದ ಬೆಳೆ ಬಿಸಿಲಿನ ತಾಪಕ್ಕೆ ಒಣಗುತ್ತಿರುವ ಕಾರಣ ಬೆಳೆ ನಾಶಪಡಿಸಲು ರೈತರು ಮುಂದಾಗಿದ್ದಾರೆ. ಕುಟುಂಬ ನಿರ್ವಹಣೆ ಕೂಡ ಕಷ್ಟವಾಗಿದೆ. ಸರ್ಕಾರ ನಮ್ಮ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ, ಕೂಡಲೇ ಅಧಿಕಾರಿಗಳು ತೆರಳಿ ಬೆಳೆಹಾನಿ ಸಮೀಕ್ಷೆ ನಡೆಸಬೇಕು’ ಸೂಕ್ತ ಪರಿಹಾರ ನೀಡಬೇಕು’ ಎಂದು ಮನವಿ ಮಾಡಿದರು.
ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತತಹಶೀಲ್ದಾರರು ದಂಡಾಧಿಕಾರಿಗಳ ಕಾರ್ಯಾಲಯ,ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪದಾಧಿಕಾರಿಗಳು ತಹಶೀಲ್ದಾರ್ ಕಛೇರಿಗೆ ಮನವಿ ಪರಿಹಾರ ಘೋಷಿಸಿ ಬೆಳೆಸಾಲ ಮರುಪಾವತಿಗೆ ಕಾಲಾವಕಾಶ ನೀಡುವುದಲ್ಲದೇ ಬಡ್ಡಿ ಮನ್ನಾ ಮಾಡುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಮಹಿಳಾ ಅಧ್ಯಕ್ಷ ಬಿ.ಎಂ.ಎಚ್ ವಿಜಯಲಕ್ಷ್ಮಿ, ಉಪಾಧ್ಯಕ್ಷರು ಮಂಜುನಾಥ, ರೈತ ಸಂಘದ ಪ್ರಧಾನಕಾರ್ಯದರ್ಶಿ ಶಿವರಾಜ ಎಂ, ಟಿ.ಪ್ರದೇಶವೆಂದು ಘೋಷಿಸಬೇಕೆಂದು ರೈತ ಸಂಘದ ಪತ್ರ ಸಲ್ಲಿಸಿದರು. ಸಂಘಟನೆ ಕಾರ್ಯದರ್ಶಿ ಗೀರೀಶ್ ಡಿ, ಗೌರವ ಅಧ್ಯಕ್ಷರು ಪಕ್ಕೀರ್ಪ, ಕೆಆರ್.ಎಸ್. ಪಕ್ಷದ ರೈತ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ದೊಡ್ಡಮನಿ, ಮುಜ್ಜು ರಹಿಮಾನ ವೇಕಟೇಶ, ದುರುಗಪ್ಪ, ದೌವಲ್ ಸಾಬ್ ಮಿಯಾಸಬ್, ರಮೇಶ, ರವಿಕಿರಣ್ ಇನ್ನಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 