ರೈತರ ಸ್ಥಿತಿಗತಿ ಅವಲೋಕನ: ಏ.6 ರಿಂದ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ
ಬೆಂಗಳೂರು,
ಏ 5,ಕೋವಿಡ್-19 ಲಾಕ್‌ಡೌನ್ ನಿಂದ ರೈತರಿಗಾಗಲೀ ರೈತರ ಪರಿಕರ
ಮಾರುಕಟ್ಟೆಗಾಗಲೀ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೂ ತರಕಾರಿ
ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ. ಈ
ಬಗ್ಗೆ ರಾಜ್ಯದ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ
ಸ್ಥಿತಿಗತಿಗಳೇನು ಎಂಬುದನ್ನು ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಅವರು
ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಏ .6 ರಿಂದ 11 ರವರೆಗೆ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಆಯಾ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾಮಟ್ಟದ ಸಭೆಗಳು ನಡೆಯಲಿವೆ.ಸಚಿವರು
ಏ.6 ರ ಸೋಮವಾರದಂದು ಧಾರವಾಡ, ಬೆಳಗಾವಿ, ಬಾಗಲಕೋಟೆ 7ರಂದು ಬಿಜಾಪುರ, ಕಲಬುರಗಿ,
ಬೀದರ್ ಏ.8ರಂದು ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ 9ರಂದು ಗದಗ್,
ಹಾವೇರಿ ಏ.10ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ 11 ರಂದು ಮೈಸೂರು, ಚಾಮರಾಜನಗರ,
ಮಂಡ್ಯ, ರಾಮನಗರ ಈ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.ಜಿಲ್ಲೆಯ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಪೊಲೀಸ್, ಕೃಷಿ,
ತೋಟಗಾರಿಕಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಲ್ಲಾಇಲಾಖೆಗಳ ಜೊತೆ
ಸಭೆ ನಡೆಸಲಿದ್ದಾರೆ.ಸಭೆಯಲ್ಲಿ ರೈತರು, ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ,ಬೀಜ
ಗೊಬ್ಬರಗಳ ಸರಬರಾಜು ಹಾಗೂ ಉಳಿದಂತಹ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ
ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 