ತಾಳಿಕೋಟಿ

ಬೂದಿಹಾಳ-ಪೀರಾಪುರ ಯೋಜನೆ ಪೂರ್ಣಕ್ಕೆ ರೈತರ ಆಗ್ರಹ

ಬೂದಿಹಾಳ-ಪೀರಾಪುರ ಯೋಜನೆ ಪೂರ್ಣಕ್ಕೆ ರೈತರ ಆಗ್ರಹ

ತಾಳಿಕೋಟಿ  18 : ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ಸಂಪೂರ್ಣ ಅನುಷ್ಠಾನಗೊಳಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ  ತಾಳಿಕೋಟಿ ತಾಲೂಕ ಘಟಕದ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ತಾಳಿಕೋಟಿ ಹಾಗೂ ಸುರಪೂರ ಭಾಗದ ರೈತರ ಪ್ರತಿಭಟನಾ ಮೆರವಣಿಗೆಗೆ  ಖಾಸ್ಗತೇಶ್ವರ ಮಠದ ಪರಮ ಪೂಜ್ಯ ಸಿದ್ದಲಿಂಗ ದೇವರು ಚಾಲನೆ ನೀಡಿದರು. ಅಲ್ಲಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಕತ್ರಿ ಬಜಾರ್,   ವಾಜಿ ಸರ್ಕಲ್, ಮಹಾರಾಣಾ ಪ್ರತಾಪ್ ಸಿಂಹ ಸರ್ಕಲ್ ಹಾಗೂ ಬಸ್ ನಿಲ್ದಾಣ ಮಾರ್ಗವಾಗಿ  ಬಸವೇಶ್ವರ ವೃತ್ತಕ್ಕೆ ತಲುಪಿ ಅಲ್ಲಿ ಮಾನವ ಸರಿ​‍್ಳ ನಿರ್ಮಿಸಿ ಕೆಲ ಹೊತ್ತು ರಸ್ತೆ ತಡೆ ನಡೆಸಿ ಯೋಜನೆ ವಿಳಂಬ ಖಂಡಿಸಿ ಧಿಕ್ಕಾರ ಕೂಗಿದರು.

ನಂತರ ಅಲ್ಲಿ ಸಮಾವೇಶಗೊಂಡ ನೂರಾರು ರೈತರನ್ನು ಉದ್ದೇಶಿಸಿ ರೈತ ಬಾಲಕಿ ಭಾಗ್ಯಶ್ರೀ ಪರಸನಹಳ್ಳಿ ಮಾತನಾಡಿ ನಮ್ಮೆಲ್ಲರ ಧರ್ಮ ಮತ್ತು ಕರ್ಮ ರೈತರನ್ನೇ ಅವಲಂಬಿಸಿದೆ ಅವರನ್ನು ನಿರ್ಲಕ್ಷಿಸಿದರೆ ಯಾರಿಗೂ ಒಳ್ಳೆಯದು ಆಗುವುದಿಲ್ಲ ಈ ಯೋಜನೆ ಪೂರ್ಣಗೊಳಿಸಲು ನಮ್ಮ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಬೇಕು ಇಲ್ಲದೆ ಹೋದರೆ ರೈತರು ಅವರಿಗೆ ಬಿಸಿ ಮುಟ್ಟಿಸಬೇಕಾಗುತ್ತದೆ ಎಂದರು. ಕರ್ನಾಟಕ ರಾಜ್ಯ ರೈತ ಸಂಘ ಯಾದಗಿರಿ ಜಿಲ್ಲಾ ಅಧ್ಯಕ್ಷ ಮಲ್ಲನಗೌಡ ಹಗರಟಗಿ ಮಾತನಾಡಿ ಸುಮಾರು 935 ಕೋಟಿ ವೆಚ್ಚದ ಈ ನೀರಾವರಿ ಯೋಜನೆ ಇನ್ನು ಕೇವಲ ಎರಡು ನೂರು ಕೋಟಿ ಅನುದಾನದಲ್ಲಿ ಪೂರ್ಣಗೊಳ್ಳಲಿದೆ ಆದರೆ ಜನಪ್ರತಿನಿಧಿಗಳು ಇದಕ್ಕೆ ಇಚ್ಚಾ ಶಕ್ತಿ ತೋರುತ್ತಿಲ್ಲ. 

ಸುದ್ದಿ ಓದಿ