ಕಬ್ಬಿನ ದರ ನಿಗದಿ ನಂತರ ಕಾರ್ಖಾನೆ ಆರಂಭಿಸಲು ರೈತರ ಆಗ್ರಹ
Farmers demand to start factories after sugarcane price fixing
ಕಬ್ಬಿನ ದರ ನಿಗದಿ ನಂತರ ಕಾರ್ಖಾನೆ ಆರಂಭಿಸಲು ರೈತರ ಆಗ್ರಹ
ಚಡಚಣ 25: ಕಬ್ಬು ಬೆಳೆಗೆ ದರ ನಿಗದಿಪಡಿಸದೆ ಹಳೆಯ ದರಗಳನ್ನೇ ಮುಂದುವರಿಸಿ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ಹಾಗೂ ರೈತರು ಶುಕ್ರವಾರ ತಹಶಿಲ್ದಾರ ಸಂಜಯ ಇಂಗಳೆ ಹಾಗೂ ಸಕ್ಕರೆ ಕಾರ್ಖಾನೆಯ ಮಾಲೀಕರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಹಾಗೂ ವಿಜಯಪುರ ಜಿಲ್ಲಾಧ್ಯಕ್ಷ ನಾಗನಾಥಗೌಡ ಬಿರಾದಾರ ಮಾತನಾಡಿ, ದತ್ತಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ಕಬ್ಬಿನ ಬೆಳೆಗೆ ದರ ನಿಗದಿಪಡಿಸದೆ ಹಳೆಯ ದರಗಳನ್ನೆ? ಮುಂದುವರಿಸಿ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಹೊರಟಿರುವುದು ಖಂಡನೀಯ. ಕಾರ್ಖಾನೆಗಳು ಮೊದಲು ಕಬ್ಬು ನುರಿಸುವ ಪ್ರಕ್ರಿಯೆಗೆ ಚಾಲನೆ ನೀಡಿ, ನಂತರ ಬೆಲೆ ನಿಗದಿ ಮಾಡುವ ನೀತಿ ಸಹಿಸುವುದಿಲ್ಲ. 3500 ರೂ. ದರ ನಿಗದಿಪಡಿಸಿ, ಮುಂಗಡ ಪಾವತಿಸಿ ಕಾರ್ಖಾನೆಗಳನ್ನು ಪ್ರಾರಂಭಿಸಬೇಕು. ಒಂದು ವೇಳೆ ಬೆಲೆ ನಿಗದಿ ಮಾಡದೇ ಕಾರ್ಖಾನೆ ಪ್ರಾರಂಬಿಸಿದರೇ ಉಗ್ರ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಸಂತೋಷ ಭೈರಗೊಂಡ, ಸತೀಶ ಭೈರಗೊಂಡ, ಮಲ್ಲಿಕಾರ್ಜುನ ಬಿರಾದಾರ, ಮಹಾದೇವ ಭಂಡಿ, ಅಶೋಕ ಬೋರ್ಗಿ, ವಿಲಾಸ ಡೊಳ್ಳಿ, ಘೇನಪ್ಪ ಬಿರಾದಾರ, ಬಸವರಾಜ ಡೋಣಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ರೈತರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 