ರೈತರು ಪರಿಹಾರ ಪಡೆಯಲು ತ್ವರಿತವಾಗಿ ಆಧಾರ್ ಸಂಖ್ಯೆಗೆ ಬ್ಯಾಂಕ್ ಖಾತೆ ಜೋಡಿಸಿಕೊಳ್ಳಬೇಕು: ಬಿ.ಸಿ.ಪಾಟೀಲ್
ಬೆಂಗಳೂರು, ಜೂ 4,ಆಧಾರ್ ಸಂಖ್ಯೆಗೆ ಇದೂವರೆಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡದ ರೈತರು ಆದಷ್ಟು ಬೇಗ ಈ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.ಸರ್ಕಾರ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಯಡಿ ಡಿಬಿಟಿ ಮಾರ್ಗಸೂಚಿಯಂತೆ ನೇರವಾಗಿ ರೈತರ ಖಾತೆಗೆ ಹಣ ವರ್ಗಾಯಿಸುತ್ತಿದೆ. ಆದರೆ ಬಹುತೇಕ ರೈತರು ತಮ್ಮ ಆಧಾರ್ ಸಂಖ್ಯೆಯನ್ನು ಅಕೌಂಟ್ ನಂ.ಗೆ ಲಿಂಕ್ ಮಾಡಿಲ್ಲ ಎಂದಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮೆಕ್ಕೆಜೋಳ ಹಾಗೂ ಹೂವುಬೆಳೆದ ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರ ರೂ ನಂತೆ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಲಾಗಿದೆ. ಆನ್ ಲೈನ್ ಮೂಲಕ ಪರಿಹಾರ ವರ್ಗಾವಣೆಯಾಗುತ್ತಿದೆ. ಸೌಲಭ್ಯ ಪಡೆಯಲು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು.
ಆದರೆ ಇನ್ನೂ ಕೆಲವು ರೈತರು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಲ್ಲ. ಹೀಗಾಗಿ ಹಲವು ರೈತರಿಗೆ ಪರಿಹಾರ ಹೋಗಿಲ್ಲ ಎಂದು ಹೇಳಿದ್ದಾರೆ. ಕೆಲವೆಡೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಯನ್ನು ಪರಿಹಾರ ನೀಡಲು ಲಿಂಕ್ ಮಾಡಿರುವ ಕುರಿತು ಆರೋಪ ಕೇಳಿ ಬಂದಿದೆ, ಏರ್ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಗೆ ಪರಿಹಾರದ ಹಣ ಹೋಗಿರುವುದಾಗಿ ದೂರುಗಳು ಬಂದಿವೆ. ಏರ್ಟೆಲ್ ಯಾವುದೇ ಪೇಮೆಂಟ್ ಶಾಖೆಗಳನ್ನು ಹೊಂದಿಲ್ಲ. ಹೀಗಾಗಿ ಏರ್ಟೆಲ್ ಔಟ್ಲೆಟ್ಗಳಿಗೆ ಹೋಗಿ ಹಣ ಪಡೆಯುವ ಪರಿಸ್ಥಿತಿ ಇಲ್ಲ. ಈ ಬಗ್ಗೆ ಏರ್ಟೆಲ್ ಕಂಪೆನಿಯ ಗಮನಕ್ಕೂ ತಂದು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ವಿಚಕ್ಷಣಾ ದಳದಿಂದ ನಕಲಿ ಬೀಜ ಮಾರಾಟ ಪತ್ತೆ ಮುಂದುವರೆದಿದೆ.
ಮೆಕ್ಕೆಜೋಳದಂತೆ ನಕಲಿ ಹತ್ತಿಬೀಜ ಮಾರಾಟ ಜಾಲವೂ ಪತ್ತೆಯಾಗಿದೆ. ರಾಯಚೂರಿನ ತುರುವೆಹಾಳದಲ್ಲಿ ಕಳೆದ ಬುಧವಾರ ತೇಜಸ್ ಎನ್ನುವ ಆಂದ್ರ ಮೂಲಕ ಖಾಸಗಿ ಕಂಪೆನಿಗೆ ಸೇರಿದ ಮೈ ಸೀಡ್ಸ್ ಹೆಸರಿನ ಕಂಪೆನಿಗೆ ಸೇರಿದ ನೂರು ಕೆಜಿ ಕಳಪೆ ಹತ್ತಿಬೀಜ ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಈ ಖಾಸಗಿ ಕಂಪೆನಿಯಿಂದ ಬೀಜ ಖರೀದಿಸಿ ಬಿತ್ತಿದ ರೈತರಿಗೆ ಬೀಜ ಮೊಳಕೆಹೊಡದಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇದನ್ನು ಗಮನಿಸಿದ ರಾಯಚೂರು ಎಡಿ ಹಾಗೂ ವಿಚಕ್ಷಣಾದಳ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಅದೇ ರೀತಿ ಮೇ.30 ರಂದು ಯಾದಗಿರಿಯ ಗೋದಾಮಿನಲ್ಲಿ ಹೈದರಾಬಾದ್ ಮೂಲದ ಕಂಪೆನಿಯೊಂದು ಅಕ್ರಮವಾಗಿ ದಾಸ್ತಾನು ಮಾಡಿದ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ನಡೆಸಿದ ದಾಳಿಯಲ್ಲಿ ಸುಮಾರು 34,595ಕ್ವಿಂಟಾಲ್ ಹತ್ತಿಬೀಜ ವಶಪಡಿಸುಕೊಳ್ಳಲಾಗಿದೆ ಎಂದಿದ್ದಾರೆ. ಇಲ್ಲಿ ಅನಧಿಕೃತ ಸಂಗ್ರಹ ಹಾಗೂ ಪ್ಯಾಕಿಂಗ್ ದಂಧೆ ಮಾಡುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ವಶಪಡಿಸಿಕೊಂಡ ಹತ್ತಿಬೀಜಗಳ ಗುಣಮಟ್ಟ ಪತ್ತೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 