ಬಳ್ಳಾರಿ

ರೈತರು ಕೃಷಿಯೇತರ ಚಟುವಟಿಕೆಗಳತ್ತಲೂ ಗಮನಹರಿಸಲಿ

ರೈತರು ಕೃಷಿಯೇತರ ಚಟುವಟಿಕೆಗಳತ್ತಲೂ ಗಮನಹರಿಸಲಿ

ಲೋಕದರ್ಶನ ವರದಿ 

 ಬಳ್ಳಾರಿ, ಸೆ.25:** ಹವಾಮಾನ ವೈಪರೀತ್ಯ ಹಾಗೂ ಮಳೆಯ ಕೊರತೆಯಿಂದ ಕೃಷಿ ಉತ್ಪಾದನೆ ಕುಂಠಿತವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಸಾಂಪ್ರದಾಯಿಕ ಕೃಷಿಯ ಜತೆಗೆ ಕೃಷಿಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಎಂ. ಸೋಮಸುಂದರ್ ಸಲಹೆ ನೀಡಿದರು.  

 ಗುರುವಾರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಇಲಾಖೆ ಹಾಗೂ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ಹಗರಿ ಸಹಯೋಗದಲ್ಲಿ ‘ಆತ್ಮ’ ಯೋಜನೆಯಡಿ ಆಯೋಜಿಸಿದ್ದ **‘ರೈತ-ವಿಜ್ಞಾನಿಗಳ ಸಂವಾದ’** ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

 ಮಹಿಳೆಯರು ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮ ಯೋಜನೆಯನ್ನು ಸಮರ​‍್ಕವಾಗಿ ಬಳಸಿಕೊಂಡು ಆಹಾರ ಉತ್ಪನ್ನಗಳ ಸಂಸ್ಕರಣೆ ಹಾಗೂ ಮಾರಾಟದ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಕರೆ ನೀಡಿದರು.  

 ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಮಣ್ಣು ವಿಜ್ಞಾನಿ ಡಾ. ರವಿ ಎಸ್‌. ಅಧ್ಯಕ್ಷತೆ ವಹಿಸಿದ್ದರು. ಬೆಳೆಗಳಿಗೆ ಅಗತ್ಯ ಪೋಷಕಾಂಶ ಹಾಗೂ ಸಾವಯವ ಗೊಬ್ಬರದ ಸಮರ​‍್ಕ ಬಳಕೆ, ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ ಹಾಗೂ ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಪ್ರಗತಿ ಸಾಧಿಸುವ ಕುರಿತು ಅವರು ಮಾಹಿತಿ ನೀಡಿದರು.  

 

ಸುದ್ದಿ ಓದಿ