ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿಕೊಳ್ಳಿ: ಎಸ್.ಎನ್. ಮಂಜುನಾಥ್ ಸಲಹೆ
Farmers should ensure they get crop insurance: S.N. Manjunath's advice
ಬಳ್ಳಾರಿ, ಜು. 23: ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜಾರಿಯಲ್ಲಿದ್ದು, ಅರ್ಹ ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಉಪ ಕೃಷಿ ನಿರ್ದೇಶಕ ಎಸ್.ಎನ್. ಮಂಜುನಾಥ್ ಕರೆ ನೀಡಿದರು. ಹಗರಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ತಾಲೂಕು ಆಡಳಿತ, ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ’ಪಿಎಂಎಫ್ಬಿವೈ ಬೆಳೆ ವಿಮೆ, ಪರ್ಯಾಯ ಬೆಳೆ ಪದ್ಧತಿಗಳು ಹಾಗೂ ಬರ ನಿರ್ವಹಣೆ’ ಕುರಿತ ರೈತರ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬ್ಯಾಂಕ್ ಸಾಲ ಪಡೆದ ರೈತರಿಗೆ ಬೆಳೆ ವಿಮೆ ಕಡ್ಡಾಯವಾಗಿದ್ದು, ಬಿತ್ತನೆಗೂ ಮುನ್ನವೇ ವಿಮೆ ಮಾಡಿಸಿಕೊಳ್ಳಬೇಕು. ಗ್ರಾಮ ಒನ್ ಅಥವಾ ಗ್ರಾಹಕ ಸೇವಾ ಕೇಂದ್ರಗಳಲ್ಲಿ ನಿಗದಿತ ಪ್ರೀಮಿಯಂ ಪಾವತಿಸಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಬಳ್ಳಾರಿ ಭಾಗದ ರೈತರು ಹತ್ತಿ, ಮೆಕ್ಕೆಜೋಳ, ಸಜ್ಜೆ ಸೇರಿದಂತೆ ವಿವಿಧ ಬೆಳೆಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ ಮಾತನಾಡಿ, ಮಳೆಆಧಾರಿತ ಹಾಗೂ ನೀರಾವರಿ ಪ್ರದೇಶಗಳ ಸೂರ್ಯಕಾಂತಿ, ಹತ್ತಿ, ಮುಸುಕಿನ ಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಜುಲೈ 31 ಬೆಳೆ ವಿಮೆ ನೋಂದಣಿಯ ಕೊನೆಯ ದಿನವಾಗಿದ್ದು, ರೈತರು ಸಕಾಲದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು. ಮಳೆ ಕೊರತೆಯಿರುವ ಹಿನ್ನೆಲೆಯಲ್ಲಿ ಬಿತ್ತನೆ ಆಗದ ಪ್ರದೇಶಗಳಲ್ಲಿ ವಿಬಿಜಿ-ರಾಮ್-ಜಿ ಹಾಗೂ ಕೃಷಿ ಭಾಗ್ಯ ಯೋಜನೆಗಳಡಿ ಕೃಷಿ ಹೊಂಡ ನಿರ್ಮಾಣ ಮತ್ತು ನೀರು ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು. ಪರ್ಯಾಯ ಬೆಳೆಗಳನ್ನು ಬೆಳೆದು ನಷ್ಟ ತಪ್ಪಿಸಿಕೊಳ್ಳುವಂತೆ ಸಲಹೆ ನೀಡಿದರು.
ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ರವಿ ಎಸ್. ಮಾತನಾಡಿ, ಜಮೀನನ್ನು ಸಮತಟ್ಟುಗೊಳಿಸಿ ಮಳೆ ನೀರನ್ನು ಭೂಮಿಯಲ್ಲಿ ಇಂಗಿಸಲು ಕ್ರಮ ಕೈಗೊಳ್ಳಬೇಕು. ಆಗಸ್ಟ್ ಅಂತ್ಯದಲ್ಲಿ ಮಳೆಯಾದರೂ ಗೋದಿ, ನವಣೆ ಹಾಗೂ ರಾಗಿ ಬೆಳೆ ಬೆಳೆಯಲು ಅವಕಾಶವಿದೆ. ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಸಿರು ಗೊಬ್ಬರ ಬಳಕೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಹವಾಮಾನ ತಜ್ಞ ಡಾ. ಕೃಷ್ಣಮೂರ್ತಿ ಮಾತನಾಡಿ, ದೇಶದ ಶೇ.70 ಪ್ರದೇಶಗಳಲ್ಲಿ ಮಳೆ ಕೊರತೆ ಉಂಟಾಗುವ ಸಾಧ್ಯತೆ.
ಇರುವುದರಿಂದ ಕಡಿಮೆ ನೀರು ಬೇಕಾಗುವ ಸಜ್ಜೆ, ಹುರುಳಿ, ಹಲಸಂದೆ ಸೇರಿದಂತೆ ಬರ ತಾಳುವ ಬೆಳೆಗಳಿಗೆ ಆದ್ಯತೆ ನೀಡುವಂತೆ ರೈತರಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಗ್ರಾಮಗಳ ರೈತರು ಭಾಗವಹಿಸಿ ಬೆಳೆ ವಿಮೆ, ಪರ್ಯಾಯ ಬೆಳೆ ಪದ್ಧತಿ ಹಾಗೂ ಬರ ನಿರ್ವಹಣೆ ಕುರಿತು ಮಾಹಿತಿ ಪಡೆದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಆತ್ಮ ಯೋಜನೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 