ರೈತರು ’ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ಮುಂದಾಗಿ
Farmers take up 'tissue culture banana farming'
ಬಳ್ಳಾರಿ,ಮೇ 30: ಬಾಳೆ ಹಣ್ಣು ದೇಶದ ಅತ್ಯಂತ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಇದರ ಉತ್ಪಾದಕತೆಯನ್ನು ಹೆಚ್ಚಿಸಲು ಸಾಂಪ್ರದಾಯಿಕ ಬಾಳೆ ಕಂದುಗಳ ಬದಲಿಗೆ ವೈಜ್ಞಾನಿಕ ತಂತ್ರಜ್ಞಾನದ ಅಂಗಾಂಶ ಕೃಷಿ ಬಾಳೆ ಸಸಿಗಳನ್ನು ಬಳಸುವಂತೆ ತೋಟಗಾರಿಕೆ ಇಲಾಖೆ ರೈತರಲ್ಲಿ ವಿನಂತಿಸಿದೆ. ಭಾರತದಲ್ಲಿ ವಾರ್ಷಿಕವಾಗಿ 9 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 383 ಲಕ್ಷ ಮೆಟ್ರಿಕ್ ಟನ್ ಬಾಳೆ ಉತ್ಪಾದನೆಯಾಗುತ್ತಿದ್ದು, ಪ್ರತಿ ಹೆಕ್ಟೇರ್‌ಗೆ 42 ಮೆಟ್ರಿಕ್ ಟನ್ ಉತ್ಪಾದಕತೆ ಇದೆ. ಆದರೆ, ಕರ್ನಾಟಕದಲ್ಲಿ 46 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕೇವಲ 12 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುತ್ತಿದ್ದು, ಪ್ರತಿ ಹೆಕ್ಟೇರ್‌ಗೆ ಉತ್ಪಾದಕತೆ ಕೇವಲ 26 ಮೆಟ್ರಿಕ್ ಟನ್‌ಗಳಷ್ಟಿದೆ.
ಇದು ರಾಷ್ಟ್ರೀಯ ಸರಾಸರಿಗಿಂತ ಗಣನೀಯವಾಗಿ ಕಡಿಮೆಯಾಗಿದೆ. ರೈತರಲ್ಲಿ ಸಮರ್ಕ ಮಾಹಿತಿಯ ಕೊರತೆಯಿಂದಾಗಿ ಇಂದಿಗೂ ಹಳೆಯ ಹಾಗೂ ಸಾಂಪ್ರದಾಯಿಕ ಬಾಳೆ ಕಂದುಗಳನ್ನು ನಾಟಿ ಮಾಡುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ರಾಜ್ಯದಲ್ಲಿ ಬಾಳೆ ಇಳುವರಿಯನ್ನು ಹೆಚ್ಚಿಸಲು ತೋಟಗಾರಿಕೆ ಇಲಾಖೆಯು ರೈತರಿಗೆ ಸುಧಾರಿತ ತಂತ್ರಜ್ಞಾನದ ಅಂಗಾಂಶ ಕೃಷಿ (ಟಿಶ್ಯೂ ಕಲ್ಚರ್) ಬಾಳೆ ಸಸಿಗಳನ್ನು ಬಳಸುವಂತೆ ಪ್ರೋತ್ಸಾಹಿಸುತ್ತಿದೆ. ರೈತರು ಸಾಮಾನ್ಯವಾಗಿ ಬಳಸುವ ಸಾಂಪ್ರದಾಯಿಕ ಬಾಳೆ ಕಂದುಗಳಿಗೂ ಮತ್ತು ವೈಜ್ಞಾನಿಕವಾಗಿ ಪ್ರಯೋಗಾಲಯದಲ್ಲಿ ಸಿದ್ಧಪಡಿಸಲಾಗುವ ಅಂಗಾಂಶ ಕೃಷಿ ಸಸಿಗಳಿಗೂ ಇರುವ ಪ್ರಮುಖ ಹದಿಮೂರು (13) ವ್ಯತ್ಯಾಸಗಳನ್ನು ಇಲಾಖೆಯು ರೈತರ ಮಾಹಿತಿಗಾಗಿ ಬಿಡುಗಡೆ ಮಾಡಿದೆ.
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ 