ಕರ್ತವ್ಯ ನಿರತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ
ಶಿಗ್ಗಾವಿ 06: ತಾಲೂಕಿನ ಹೊಸೂರುಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಗ್ರಾಮಸ್ಥರಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು ಕಂಡು ಬಂದಿದ್ದು. ನಿನ್ನೆ ಸಾಯಂಕಾಲ ಸರಿ ಸುಮಾರು 4 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಚಿಕಿತ್ಸೆಗಾಗಿ ಶಿಗ್ಗಾವಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪ್ರಕರಣ ತಡಸ ಪೊಲೀಸ್ಠಾಣೆಯಲ್ಲಿ ದಾಖಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ಆರು ಜನ ಆರೋಪಿತರಿದ್ದು, ಈ ಪ್ರಕರಣವನ್ನು ಕೈಗೆತ್ತಿಕೊಂಡ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದಂತೆ ಎರಡು ಜನ ಆರೋಪಿಗಳನ್ನು ಪೊಲೀಸರು ಬಂದಿಸಿದ್ದು ಉಳಿದ ನಾಲ್ಕು ಜನಆರೋಪಿತರ ಹುಡುಕಾಟದಲ್ಲಿದ್ದಾರೆಂದು ತಿಳಿಸಿದ್ದಾರೆ.