ಕಾಂಗ್ರೆಸ ಪಕ್ಷಕ್ಕೆ ಸೋಲಿನ ಭಯ ಪ್ರಾರಂಭವಾಗಿದೆ: ಬೊಮ್ಮಾಯಿ
ಹಾವೇರಿ 16: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದೇಶದಲ್ಲಿ 400ಕ್ಕಿಂತಲೂ ಅಧಿಕ ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ ಎಂದು ಮಾಜಿ ಮುಖ್ಯ ಮಂತ್ರಿಗಳು ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಚುನಾವಣಾ ಜಿಲ್ಲಾ ಅವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಉತ್ತಮ ಯೋಜನೆಗಳನ್ನು ಹಾಗೂ ಸಾಧನೆಗಳನ್ನು ಮನಗಂಡು ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೇಸ ಪಕ್ಷಕ್ಕೆ ಸೋಲಿನ ಭಯ ಪ್ರಾರಂಭವಾಗಿದೆ. ರಾಜ್ಯದ ಕಾಂಗ್ರೇಸ ಪಕ್ಷದ ನಾಯಕರಿಗೆ ನರೇಂದ್ರ ಮೋದಿಯವರನ್ನು ಟೀಕಿಸುವುದನ್ನು ಬಿಟ್ಟರೆ ಬೇರೆ ಕೆಲಸಗಳಿಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ,ಹಾಡುಹಗಲೇ ಮಹಿಳೆಯರ ಹತ್ಯೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಕಳೆದರೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ಯೋಜನೆಗಳ ಹೆಸರಲ್ಲಿ ಕಾಂಗ್ರೇಸ ಪಕ್ಷ ರಾಜ್ಯವನ್ನು ಸುಲಿಗೆ ಮಾಡುತ್ತಿದೆ.ಈ ಬಾರಿ ನನ್ನ ಚುನಾವಣೆಯಲ್ಲಿ ಹಗಲಿರುಳು ಶ್ರಮವಹಿಸಿದ ಎಲ್ಲರಿಗೂ ಕೃತಜ್ಞೆ ಸಲ್ಲಿಸುತ್ತೇನೆ. ಈ ಬಾರಿ ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿಯಾಗಿ ಜವಾಬ್ದಾರಿ ಸ್ವೀಕರಿಸುವುದರಲ್ಲಿ ಯಾವುದೇ ಸಂಶಯವಿಲ್ಲ ನಾವೆಲ್ಲರೂ ಅತ್ಮವಿಶ್ವಾಸದಿಂದ ಕೆಲಸ ಮುಂದುವರಿಸೋಣ ಎಂದರು.
ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಅಧ್ಯಕ್ಷತೆವಹಿಸಿ ಮಾತನಾಡಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಬಸವರಾಜ ಬೋಮ್ಮಾಯಿ ಅವರು 1 ಲಕ್ಷಕ್ಕಿಂತಲೂ ಅಧಿಕ ಮತಗಳ ಅಂತರದಿಂದ ಜಯ ಗಳಿಸುತ್ತಾರೆ.ಈ ವಿಜಯ ಹಗಲಿರುಳು ಶ್ರಮಿಸಿದ ನಮ್ಮ ಪಕ್ಷದ ಸರ್ವರಿಗೂ ಧನ್ಯವಾದಗಳು ಎಂದರು.
ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಸಂಚಾಲಕರಾದ ಮಂಜುನಾಥ ಓಲೇಕಾರ,ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ವೀರುಪಾಕ್ಷಪ್ಪ ಬಳ್ಳಾರಿ,ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮ್ಮಣವರ ಮಾತನಾಡಿದರು.
ಸಭೆಯಲ್ಲಿ ಮಾಜಿಮುಖ್ಯ ಸಚೇತಕ ಡಿ,ಎಮ್ ಸಾಲಿ, ಜಿಲ್ಲಾ ಸಂಘಟನ ಪ್ರಭಾರಿ ಎನ್, ಎಲ್. ಕಲ್ಲೇಶ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾಽಽ ಶೋಭಾ ನಿಸ್ಸಿಮಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂಜುಡೇಶ ಕಳ್ಳೆರ, ಡಾ.ಸಂತೋಷ ಆಲದಕಟ್ಟಿ, ಮಂಜುನಾಥ ಗಾಣಿಗೇರ ಹಾಗೂ ಜಿಲ್ಲೆಯ ಪದಾಧಿಕಾರಿಗಳು,ಜಿಲ್ಲಾ ಮೋರ್ಚಾ ಪದಾಧಿಕಾರಿಗಳು, ವಿವಿದ ಮಂಡಲಗಳ ಪದಾಧಿಕಾರಿಗಳು,ಮಹಾ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.