ಲೇಖನಗಳು

ವೈಶಿಷ್ಟ್ಯಪೂರ್ಣ ಗಣೇಶ ಚತುರ್ಥಿಯ ಪೌರಾಣಿಕ ಮಹತ್ವ

ವೈಶಿಷ್ಟ್ಯಪೂರ್ಣ ಗಣೇಶ ಚತುರ್ಥಿಯ ಪೌರಾಣಿಕ ಮಹತ್ವ

ಗಣೇಶ ಚತುರ್ಥಿ ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಸಾಂಪ್ರದಾಯಿಕ ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ ಹಬ್ಬವಾಗಿದೆ ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.. 

ಪುರಾಣದಲ್ಲಿ : ಶಿವಪುರಾಣದಲ್ಲಿ ಹೇಳಿರುವಂತೆ ಗಣಪತಿಯನ್ನು ತುಳಸೀ ದಳದಲ್ಲಿ ಪೂಜಿಸಬಾರದು. ಏಕೆಂದರೆ ತುಳಸಿಯ ದರ್ಶನ ಮತ್ತು ಗಂಧಗಳು ಗಣೇಶ ದೇವರಿಗೆ ಸಂಬಂಧಪಟ್ಟ ಒಳಕೇಂದ್ರಗಳನ್ನು ಮುಚ್ಚುತ್ತವೆ. ಕೇತಕೀ ಪುಷ್ಪದ ಸ್ಪರ್ಶವು ಶಿವನ ದರ್ಶನಕ್ಕೆ ಸಂಬಂಧಪಟ್ಟ ಕೇಂದ್ರಗಳ ಪ್ರಭಾವವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಚೌತಿಯ ಚಂದ್ರನ ದರ್ಶನವೂ ಗಣೇಶನ ಉಪಾಸನೆಗೆ ಪ್ರತಿಬಂಧಕವಾಗಿದೆ. 

ಸೂರ್ಯನು ಬುದ್ಧಿತತ್ವಕ್ಕೆ ಮತ್ತು ಚಂದ್ರನು ಮನಸ್ತತ್ವಕ್ಕೆ ದೇವತೆ. ಗಣೇಶನ ಆಳ್ವಿಕೆಗೆ ಒಳಪಟ್ಟಿರುವ ಇಪ್ಪತ್ತೊಂದು ತತ್ವಗಳಲ್ಲಿ ಕೊನೆಯದು ಮನಸ್ಸು. ಉಳಿದ ಇಪ್ಪತ್ತು ತತ್ವಗಳಾವುವೆಂದರೆ, ಪಂಚಭೂತಗಳು, ಪಂಚ ಕಮೇಂರ್ದ್ರಿಯಗಳು, ಪಂಚ ಜ್ಞಾನೇಂದ್ರಿಯಗಳು ಮತ್ತು ಪಂಚತನ್ಮಾತ್ರೆಗಳು. ಮನಸ್ಸನ್ನು ಸಂಯಮದಿಂದ ಒಳಗಿನ ಜ್ಞಾನಾಕಾಶದಲ್ಲಿ ಲಯಗೊಳಿಸಿದರೆ ಗಣೇಶನ ಮಹಿಮೆಯ ಅನುಭವ ಉಂಟಾಗುತ್ತದೆ. 

ಗಣೇಶ ಚತುರ್ಥಿಯ ರಾತ್ರಿ ಇಂತಹ ಸಂಯಮದಲ್ಲಿದ್ದು ಭಗವಂತನ ನಿಜಸ್ವರೂಪವನ್ನು ಅನುಭವಿಸುತ್ತಾ ಆನಂದವಾಗಿರಬೇಕು. ಹಾಗೆ ಮಾಡದೇ ಅದನ್ನು ಹೊರಗಿನ ಆಕಾಶದಲ್ಲಿ ಕಾಣುವ ಚಂದ್ರರೂಪದಲ್ಲಿ ನೋಡುವುದರಲ್ಲಿ ಆಸಕ್ತಿ ಹೊಂದಿದರೆ, ಗಣೇಶನ ಮಹಿಮೆಯ ಅರಿವು ಉಂಟಾಗದೇ ಅವನ ರೂಪವನ್ನು ಹಾಸ್ಯಮಾಡುವ ದುರ್ಬುದ್ಧಿಯುಂಟಾಗುತ್ತದೆ. 

ಗೌರಿ ಸುತನ ಜನನದ ಹಿನ್ನೆಲೆ : ಯಾಜ್ಞವಲ್ಕ್ಯ ಸ್ಮೃತಿಯ ಪ್ರಕಾರ ಅಂಬಿಕೆಯು ಗಣಪತಿಯ ತಾಯಿ. ಇನ್ನೊಂದು ಕಥೆಯ ಪ್ರಕಾರ ಆತನು ಪಾರ್ವತಿಯ ಮೈಯಿಂದ ಹುಟ್ಟಿದವನು. ಸ್ವರ್ಣಗೌರಿಯ ಮಾನಸ ಪುತ್ರ ಈತ. ಗೌರಿ ತನ್ನ ಮೈಕೊಳೆಯಿಂದ ಆಕೃತಿಯೊಂದನ್ನು ಸೃಷ್ಟಿಸಿ ಅದಕ್ಕೆ ಜೀವತುಂಬಿ ಸ್ನಾನ ಮಾಡಲು ಹೋಗಿರುತ್ತಾಳೆ. ತಾಯಿಯ ಅಣತಿಯಂತೆ ಗಣಪ ಮನೆಯನ್ನು ಕಾಯುತ್ತಿರುತ್ತಾನೆ. ಶಿವನು ಮನೆಗೆ ಹಿಂತಿರುಗಿದಾಗ, ಗಣಪ ಅವನನ್ನು ತಡೆದು ಮನೆಯೊಳಗೆ ಹೋಗಲು ಅಡ್ಡಿಪಡಿಸುತ್ತಾನೆ. 

ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು. ಸ್ನಾನ ಮುಗಿಸಿ ಬಂದ ಗೌರಿ ಮಗನ ಕಳೇಬರ ಕಂಡು ರೋದಿಸುತ್ತಾಳೆ. ಹೆಂಡತಿಯನ್ನು ಸಮಾಧಾನ ಪಡಿಸುವ ಸಲುವಾಗಿ ಶಿವ ತನ್ನ ಗಣಗಳನ್ನು ಕರೆದು ಉತ್ತರ ದಿಕ್ಕಿಗೆ ಯಾರಾದರೂ ತಲೆ ಹಾಕಿ ಮಲಗಿದ್ದರೆ, ಅಂತಹವರ ತಲೆಯನ್ನು ಕತ್ತರಿಸಿ ತರುವಂತೆ ಆಜ್ಞಾಪಿಸುತ್ತಾನೆ. 

ಅವರು ಉತ್ತರ ದಿಕ್ಕಿನಲ್ಲಿ ಮಲಗಿದ್ದ ಮರಿಯಾನೆ ತಲೆಯನ್ನು ಕತ್ತರಿಸಿ ತರುತ್ತಾರೆ. ನಂತರ ಅದನ್ನು ಗಣಪನ ಶರೀರಕ್ಕೆ ಅಂಟಿಸುವರು. ಹೀಗಾಗಿ ಗಣಪ ಗಜಮುಖನಾಗಿ, ಗಣಗಳ ಅಧಿಪತಿ ಮತ್ತು ಮೊದಲ ಅಗ್ರಪೂಜೆಗೆ ಅರ್ಹನಾಗುತ್ತಾನೆ. ವಿಘ್ನ ವಿನಾಶಕ ವಿನಾಯಕನಾಗಿರುವನು. 

ಗಣೇಶ ಚತುರ್ಥಿ ಹಬ್ಬದ ಆಚರಣೆಯ ಧಾರ್ಮಿಕ ಹಿನ್ನೆಲೆ : ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂತಿರುಗುತ್ತಾನೆ. ಸಾಮಾನ್ಯವಾಗಿ ಈ ಹಬ್ಬ ಭಾದ್ರಪದ ಚೌತಿಯ ದಿನದಂದು ಬರುತ್ತದೆ. ಆ ದಿನ ಯಾರೂ ಚಂದ್ರನನ್ನು ನೋಡಬಾರದು. ಗಣೇಶ ಭೂಲೋಕಕ್ಕೆ ಬಂದ ದಿನವನ್ನು ವಾರಗಟ್ಟಲೆ ಸಂಭ್ರಮದಿಂದ ಆಚರಿಸುವುದು ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಅಂದು ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. 

ಗಣೇಶನ ಹಬ್ಬದ ವೈಶಿಷ್ಟ್ಯತೆಗಳು : ನಮ್ಮ ದೇಶದಲ್ಲಿ ಗಣಪತಿಯ ಪೂಜೆಯು ಅನಾದಿ ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುವುದನ್ನು ತಡೆಯುವ ಸಲುವಾಗಿ ರೈತಾಪಿ ಜನಗಳು ಆನೆಯ ಮುಖವುಳ್ಳ ದೇವನನ್ನು ಪೂಜಿಸಿದರೆ, ಗೋದಾಮುಗಳಲ್ಲಿ ಧಾನ್ಯಗಳನ್ನು ತಿಂದು ಹಾಳು ಮಾಡುವ ಇಲಿಗಳನ್ನೂ ಪೂಜಿಸಿ ಇಬ್ಬರನ್ನೂ ಸಮಾಧಾನಿಸುವುದೂ ಹಬ್ಬದ ಒಂದು ಕಾರಣವೆಂದು ಕೆಲವರು ಹೇಳುವರು. 

ಅದಲ್ಲದೇ ಹೊಲಗಳಲ್ಲಿ ನಿಲ್ಲಿಸುವ ಬೆರ್ಚಪ್ಪನಿಗೂ ಗಣಪತಿಯಂತೆ ಡೊಳ್ಳು ಹೊಟ್ಟೆಯನ್ನು ಮಾಡಿರುತ್ತಾರೆ. ಇದಲ್ಲದೇ ಗಣಪತಿಯನ್ನು ಬರ್ಮಾ, ಮಲೇಶಿಯಾ, ಇಂಡೋನೇಶಿಯಾ, ಚೀನಾ, ಸುಮಾತ್ರಾ, ಜಾವಾ, ಜಾಪಾನ್ ಮತ್ತಿತರ ದೇಶಗಳಲ್ಲಿಯೂ ಪೂಜಿಸುತ್ತಿದ್ದರು. ವಿಜ್ಞಾನಿಗಳ ಸೃಷ್ಟಿಯ ವಿಕಾಸಕ್ಕೂ ನಮ್ಮ ಪುರಾಣಗಳಲ್ಲಿ ಹೇಳುವ ದಶಾವತಾರ ಕಥೆಗಳಿಗೂ ಹೋಲಿಕೆಯುಂಟು. 

ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ.ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಮಿಕ್ಕೆಲ್ಲ ದೇವರುಗಳಂತೆ ಇದಕ್ಕೂ ಷೋಡಶಾಂಗ ಪೂಜಾವಿಧಾನದ ರೀತ್ಯಾ ಪೂಜಿಸುವರು. ಪೂಜೆಯ ನಂತರ ಹತ್ತುದಿನಗಳ ವರೇಗೆ ನಿತ್ಯ ಪೂಜೆಯನ್ನು ಮಾಡಿ 10ನೆಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು.ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ. 

"ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್" 

ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಅಂತ್ಯಂತ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಕರಾವಳಿ ಪ್ರದೇಶದಲ್ಲಿ ತನ್ನದೇ ಆದ ಪರಂಪರೆ ಹೊಂದಿದೆ. ಇಲ್ಲಿ ಡೊಳ್ಳು ಕುಣಿತ,ಹುಲಿವೇಷ, ಯಕ್ಷಗಾನ ಮುಂತಾದವು ಇಲ್ಲಿನ ಗಣೇಶೋತ್ಸವಕ್ಕೆ ಮೆರಗು ತರುತ್ತದೆ. ಕುಂದಾಪುರ, ಶಿರೂರು, ಮಂಗಳೂರು, ಉಡುಪಿ ಮುಂತಾದ ಕಡೆಯಲ್ಲಿ ಸುಂದರವಾದ ಸಂಭ್ರಮದ ಗಣೇಶ ಚತುರ್ಥಿ ನಡೆಯುತ್ತದೆ. ಗಣಗಳ ಅಧಿಪತಿಯಾದ ಗಣಪತಿಯನ್ನು ಮೊದಲು ಪೂಜಿಸಲಾಗುತ್ತದೆ, ಎಲ್ಲಕ್ಕಿಂತ ಮೊದಲು ಅವನನ್ನು ಪೂಜಿಸಲಾಗುತ್ತದೆ, ಅವನ ನಂತರ ಇತರ ದೇವತೆಗಳನ್ನು ಪೂಜಿಸಲಾಗುತ್ತದೆ. ಯಾವುದೇ ಆಚರಣೆಯಲ್ಲಿ, ಗಣೇಶನನ್ನು ಮೊದಲು ಪೂಜಿಸಲಾಗುತ್ತದೆ ಏಕೆಂದರೆ ಗಣೇಶ ಅಡೆತಡೆಗಳ ನಾಶಕ ಮತ್ತು ಬರುವ ಎಲ್ಲಾ ಅಡೆತಡೆಗಳನ್ನು ನಿವಾರಿಸುತ್ತಾನೆ. ವಿಘ್ನವಿನಾಶಕ ವಿಘ್ನನಿವಾರಕ ಎಂದು ಪೂಜಿಸುವರು  

ಗಣಗಳ ಅಧಿಪತಿಯಾದ ಗಣಪತಿಯನ್ನು ನಾನಾ ಹೆಸರುಗಳಿಂದ ಕರೆಯಲಾಗುತ್ತದೆ ಗಣಪತಿ, ವಿನಾಯಕ, ಗಜಾನನ, ಏಕದಂತ ಹೇಗೆ ನಾನಾ ಹೆಸರಿಂದ ಕರೆಯಲಾಗುತ್ತದೆ. ಈ ಬಾರಿ ಗಣೇಶ ಚತುರ್ಥಿ ಹಬ್ಬವನ್ನು ಆಗಸ್ಟ್‌ 31 ಬುಧವಾರದಂದು ಆಚರಿಸಲಾಗುತ್ತದೆ.     ಶ್ರೀ ಗಣೇಶ ಹಬ್ಬದ ಇತಿಹಾಸವು ಬಹಳ ಪ್ರಾಚೀನವಾದುದು. ಗಣೇಶನನ್ನು ಅಡೆತಡೆಗಳ ನಾಶಕ ಎಂದು ಪರಿಗಣಿಸಲಾಗಿದೆ. ಇದು ಪೌರಾಣಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಈ ಹಬ್ಬವನ್ನು ಪುಣೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಪ್ರಾರಂಭಿಸಿದರು. ಶಿವಾಜಿ ಮಹಾರಾಜರು ಅತ್ಯಂತ ಉತ್ಸಾಹ ಮತ್ತು ಉತ್ಸಾಹದಿಂದ ಗಣೇಶೋತ್ಸವವನ್ನು ಪ್ರಾರಂಭಿಸಿದರು, ಅವರು ಈ ಉತ್ಸವದ ಮೂಲಕ ಜನಜಾಗೃತಿ ಮೂಡಿಸಿದರು.  

ಲೋಕ ಮಾನ್ಯ ತಿಲಕರು ಸಾರ್ವಜನಿಕ ಗಣೇಶೋತ್ಸವ ಪ್ರವರ್ತಕರು 1630-1680 ರ ಅವಧಿಯಲ್ಲಿ ಛತ್ರಪತಿ ಶಿವಾಜಿ (ಸಂಸ್ಥಾಪಕ) ಕಾಲದಲ್ಲಿ ಸಾರ್ವಜನಿಕ ಸಮಾರಂಭವಾಗಿ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು ಎಂದು ಅಂದಾಜಿಸಲಾಗಿದೆ. ಮರಾಠಾ ಸಾಮ್ರಾಜ್ಯ) ಎಂದು ಆಚರಿಸಲಾಯಿತು ಶಿವಾಜಿಯ ಕಾಲದಲ್ಲಿ, ಈ ಗಣೇಶೋತ್ಸವವನ್ನು ಅವನ ಸಾಮ್ರಾಜ್ಯದ ಟೋಟೆಮ್ ಆಗಿ ನಿಯಮಿತವಾಗಿ ಆಚರಿಸಲು ಪ್ರಾರಂಭಿಸಿತು. 

ಪೇಶ್ವೆಗಳ ಅಂತ್ಯದ ನಂತರ, ಇದು ಕುಟುಂಬದ ಹಬ್ಬವಾಗಿ ಉಳಿಯಿತು, ಇದನ್ನು 1893 ರಲ್ಲಿ ಬಾಲ ಗಂಗಾಧರ ಲೋಕಮಾನ್ಯ ತಿಲಕ್ (ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಮಾಜ ಸುಧಾರಕ) ಪುನರುಜ್ಜೀವನಗೊಳಿಸಿದರು. 

ಗಣೇಶ ಚತುರ್ಥಿಯನ್ನು ಹಿಂದೂ ಜನರು ವಾರ್ಷಿಕ ದೇಶೀಯ ಹಬ್ಬವಾಗಿ ಹೆಚ್ಚಿನ ಸಿದ್ಧತೆಯೊಂದಿಗೆ ಆಚರಿಸಲು ಪ್ರಾರಂಭಿಸಿದರು. ಸಾಮಾನ್ಯವಾಗಿ ಇದನ್ನು ಬ್ರಾಹ್ಮಣ ಮತ್ತು ಬ್ರಾಹ್ಮಣೇತರರ ನಡುವಿನ ಸಂಘರ್ಷವನ್ನು ಹೋಗಲಾಡಿಸಲು ಮತ್ತು ಜನರಲ್ಲಿ ಐಕ್ಯತೆಯನ್ನು ತರಲು ರಾಷ್ಟ್ರೀಯ ಹಬ್ಬವಾಗಿ ಆಚರಿಸಲು ಪ್ರಾರಂಭಿಸಲಾಯಿತು. 

ಬ್ರಿಟಿಷರ ಆಳ್ವಿಕೆಯಲ್ಲಿ ಮಹಾರಾಷ್ಟ್ರದ ಜನರು ಅತ್ಯಂತ ಧೈರ್ಯ ಮತ್ತು ರಾಷ್ಟ್ರೀಯತೆಯ ಉತ್ಸಾಹದಿಂದ ಬ್ರಿಟಿಷರ ಕ್ರೂರ ವರ್ತನೆಗೆ ಪ್ರತಿಕ್ರಿಯಿಸಿದ್ದಾರೆ. ಫ್ರೀ ಆಗಿರಬೇಕೆಂದು ಸಂಭ್ರಮಿಸಲು ಶುರು ಮಾಡಿದೆ. ಗಣೇಶ ವಿಸರ್ಜನ ಆಚರಣೆಯನ್ನು ಬಾಲಗಂಗಾಧರ ಲೋಕಮಾನ್ಯ ತಿಲಕರು ಸ್ಥಾಪಿಸಿದರು. ಕ್ರಮೇಣ ಜನರು ಈ ಹಬ್ಬವನ್ನು ಕುಟುಂಬದ ಆಚರಣೆಗಳಿಗಿಂತ ಸಮುದಾಯದ ಸಹಭಾಗಿತ್ವದ ಮೂಲಕ ಆಚರಿಸಲು ಪ್ರಾರಂಭಿಸಿದರು. ಸಮಾಜ ಮತ್ತು ಸಮುದಾಯದ ಜನರು ಸಾಮೂಹಿಕವಾಗಿ ಬೌದ್ಧಿಕ ಭಾಷಣ, ಕವನ, ನೃತ್ಯ, ಭಕ್ತಿಗೀತೆಗಳು, ನಾಟಕ, ಸಂಗೀತ ಉತ್ಸವಗಳು, ಜಾನಪದ ನೃತ್ಯ ಮುಂತಾದ ಚಟುವಟಿಕೆಗಳನ್ನು ಒಟ್ಟಾಗಿ ಸಮುದಾಯ ಉತ್ಸವವಾಗಿ ಆಚರಿಸಲು ನಡೆಸುತ್ತಾರೆ. ಜನರು ದಿನಾಂಕದ ಮೊದಲು ಒಟ್ಟುಗೂಡುತ್ತಾರೆ ಮತ್ತು ಆಚರಿಸುತ್ತಾರೆ ಮತ್ತು ಅಂತಹ ದೊಡ್ಡ ಗುಂಪನ್ನು ಹೇಗೆ ನಿಭಾಯಿಸಬೇಕೆಂದು ನಿರ್ಧರಿಸುತ್ತಾರೆ.  

ಹಿಂದೂ ಪುರಾಣಗಳ ಪ್ರಕಾರ, ಗಣೇಶನು ಮಾಘ ಮಾಸದ ಚತುರ್ಥಿಯಂದು (ಪ್ರಕಾಶಮಾನವಾದ ಹದಿನೈದು ದಿನದ ನಾಲ್ಕನೇ ದಿನ) ಜನಿಸಿದನೆಂದು ನಂಬಲಾಗಿದೆ. ಅಂದಿನಿಂದ, ಗಣೇಶನ ಜನ್ಮ ದಿನಾಂಕವನ್ನು ಗಣೇಶ ಚತುರ್ಥಿ ಎಂದು ಆಚರಿಸಲು ಪ್ರಾರಂಭಿಸಲಾಯಿತು. ಇತ್ತೀಚಿನ ದಿನಗಳಲ್ಲಿ, ಈ ಹಬ್ಬವನ್ನು ಹಿಂದೂಗಳು ಮತ್ತು ಪ್ರಪಂಚದಾದ್ಯಂತ ಅನೇಕ ಇತರ ಸಮುದಾಯಗಳು ಆಚರಿಸುತ್ತಾರೆ.  ಇದೇ ದಿನಾಂಕ 30 ರಂದು ಗೌರಿ ಪೂಜೆ ಹಾಗೂ 31 ರಂದು ಗಣೇಶ ಚತುರ್ಥಿಯ ಆಚರಣೆಯು ಸಮಸ್ತ ಸಧ್ಭಕ್ತವೃಂದದವರಿಗೆ ಸೌಜನ್ಯತಾ ಸಮಗ್ರ ನಾಗರೀಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸಹನಾ ರಾಘವೇಂದ್ರ ಪಾಲನಕರ ಹಾಗೂ ಸಮಸ್ತ ಸಿಬ್ಬಂದಿ ವರ್ಗದವರಿಂದ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೊರಲಾಗಿರುತ್ತದೆ. 

- ಶ್ರೀಮತಿ ಸಹನಾ ರಾಘವೇಂದ್ರ ಪಾಲನಕರ 

ಗದಗ 

- * * * - 


ಸುದ್ದಿ ಓದಿ