ಫೆ. 24ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ : ಕುಲಪತಿ ಪ್ರೊ. ವಿದ್ಯಾಶಂಕರ್

ಫೆ. 24ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ : ಕುಲಪತಿ ಪ್ರೊ. ವಿದ್ಯಾಶಂಕರ್

ಬೆಳಗಾವಿ : ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವನ್ನು ಫೆ.24ರಂದು ವಿವಿಯ ಜ್ಞಾನ ಸಂಗಮದ ಅಬ್ದುಲ್‌ ಕಲಾಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾ‌ನ ಮಾಡಲಾಗುವುದು ಎಂದು ಕುಲಪತಿ ಪ್ರೊ. ವಿದ್ಯಾಶಂಕರ ಎಸ್. ಇಂದಿಲ್ಲಿ ಹೇಳಿದರು.

   ಸೋಮವಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ  ಕರೆಯಲಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಘಟಿಕೋತ್ಸವದ ಅಧ್ಯಕ್ಷತೆಯನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ದೆಹಲಿಯ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ನ ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ್ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾಯರಾಯಣ ಉಪಸ್ಥಿತರಿರುವವರು ಎಂದು ತಿಳಿಸಿದರು.

   ಅಲ್ಲದೆ ವಿವಿಯ ಘಟಿಕೋತ್ಸವದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯುನ್ನತ ‌ಸೇವೆ ಸಲ್ಲಿಸಿದ ಟೋಯೊಟಾ ಕಿರ್ಲೋಸ್ಕರ್ ಮೋಟರ್ಸ್ ನ ವಿಕ್ರಮ್ ಕಿರ್ಲೋಸ್ಕರ್ ಅವರಿಗೆ ಮರಣೋತ್ತರ, ಎಂ.ಲಕ್ಷ್ಮೀ ನಾರಾಯಣ ಹಾಗೂ ಉದ್ಯಮಿ‌ ಸಚಿನ ಸಬ್ನಿಸ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.

  ಸಿವಿಲ್ ಇಂಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬೆಂಗಳೂರಿನ  ಮುರುಳಿ ಎಸ್. ವಿದ್ಯಾರ್ಥಿ 18 ಚಿನ್ನದ ಪದಕ‌ ಪಡೆದಿದ್ದಾನೆ.‌ ಇದು ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸಾಧನೆ ಮಾಡಿದ ವಿದ್ಯಾರ್ಥಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕುರುಂಜಿ ವೆಂಕಟರಮನ್ ಗೌಡ ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯಾದ ವಿದ್ಯಾರ್ಥಿನಿ 8 ಚಿನ್ನದ ಪದಕ ಪಡೆದಿದ್ದಾರೆ ಎಂದು ವಿವರಿಸಿದರು.

ಇಂದಿನ ಪತ್ರಿಕಾಗೋಷ್ಠಿಯಲ್ಲಿ ಪ್ರೊ. ಬಿ. ಈ. ರಂಗಸ್ವಾಮಿ, ಡಾ. ಪಿ.ಎನ್.ಶ್ರೀನಿವಾಸ ಉಪಸ್ಥಿತರಿದ್ದರು.

ಸುದ್ದಿ ಓದಿ