ಹಾಡುಗಳಿಂದ ಸೌಂಡ್ ಮಾಡುತ್ತಿರುವ 'ಹಯಗ್ರೀವ'
Feb. Dhanveer and Sanjana Anand's film will hit the screens on 27th
ಲೋಕದರ್ಶನ ವರದಿ
ಫೆ. 27ರಂದು ಧನ್ವೀರ್, ಸಂಜನಾ ಆನಂದ್ ಅಭಿನಯದ ಚಿತ್ರ ತೆರೆಗೆ
'ಬಜಾರ್' ಖ್ಯಾತಿಯ ಧನ್ವೀರ್ ಅಭಿನಯದ 5ನೇ ಸಿನಿಮಾ 'ಹಯಗ್ರೀವ' ಬಿಡುಗಡೆಗೆ ದಿನ ಗಣನೆ ಆರಂಭವಾಗಿದ್ದು, ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲಿದೆ. ಈಗಾಗಲೇ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ 'ಮೊದಲನೇ ಮಾತು...' ಎಂಬ ಹಾಡು ಬಿಡುಗಡೆ ಆಗಿ ಎರಡು ಮಿಲಿಯನ್‌ಗೂ ಹೆಚ್ಚು ಜನರಿಂದ ವೀಕ್ಷಣೆ ಆಗಿದೆ. ಇತ್ತೀಚೆಗಷ್ಟೇ ಚಿತ್ರದ ಎರಡನೇ 'ಸೇನೆ ಮುಖ್ಯಸ್ಥ ...' ಲಿರಿಕಲ್ ಹಾಡು ಬಿಡುಗಡೆ ಆಗಿದ್ದು, ಪ್ರೇಕ್ಷಕರಿಂದ ಪ್ರಶಂಸೆ ಪಡೆಯುತ್ತಿದೆ. ಈ ಗೀತೆಯನ್ನು ಚಂದನ್ ಶೆಟ್ಟಿ ಹಾಡಿದ್ದು, ಡಾ. ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಚಿತ್ರಕ್ಕೆ ಜೋಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದ ನಾಯಕಿಯಾಗಿ ಧನ್ವೀರ್‌ಗೆ ಸಾಥ್ ನೀಡಿದ್ದಾರೆ ಬ್ಯಾಂಗಲ್ ಬಂಗಾರಿ ಸಂಜನಾ ಆನಂದ್. ರಘು ಕುಮಾರ್ ನಿರ್ದೇಶನದ 'ಹಯಗ್ರೀವ' ಸಿನಿಮಾವನ್ನು ಕೆ.ವಿ.ಸಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶ್ರೀಮತಿ ಪದ್ಮಾ ಸಮೃದ್ದಿ ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ವಿರಾಟ್ ಸಾಯಿ ಕ್ರಿಯೇಷನ್ಸ್ ಅರ್ಪಿಸುವ ಈ ಚಿತ್ರಕ್ಕೆ ಮಹೇಶ್ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಫೆಬ್ರವರಿ ಕೊನೆ ವಾರ ತೆರೆಗೆ ಬರುತ್ತಿರುವ ಈ ಚಿತ್ರದ ತಾರಾಗಣದಲ್ಲಿ ಸಾಧು ಕೋಕಿಲ, ಶರತ್ ಲೋಹಿತ್ಶ್ವರ, ರಮೇಶ್ ಭಟ್, ಅಶ್ವಿನಿ ಗೌಡ, ಶೋಭರಾಜ್, ಸಂಗೀತಾ, ಕೃಷ್ಣ ಹೆಬ್ಬಾಳೆ, ಅಶ್ವಿನ್ ಹಾಸನ್, ಗಿಲ್ಲಿ ನಟ ಮುಂತಾದವರು ಇದ್ದಾರೆ. ಉಳಿದಂತೆ ಚಿತ್ರಕ್ಕೆ ಗೀರೀಶ್ ಆರ್ ಗೌಡ ಛಾಯಾಗ್ರಹಣ, ಸೈಲೇಶ್ ಕುಮಾರ್ ಹಾಗೂ ಚೇತನ್ ಸಿದ್ ಸಂಭಾಷಣೆ, ಭೂಷಣ್ ನೃತ್ಯ ನಿರ್ದೇಶನ, ಕೆ.ಎಂ. ಪ್ರಕಾಶ್ ಸಂಕಲನ, ಡಾ. ಕೆ.ರವಿವರ್ಮ, ಡಿಫರೆಂಟ್ ಡ್ಯಾನಿ, ಅರ್ಬನ್ ರಾಜ್ ಸಾಹನವಿದೆ. ಅಂದಂಗೆ ಸದ್ಯದಲ್ಲೇ ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 