ಫೆ. 11ರಂದು ರಾಷ್ಟ್ರೀಯ ಲೋಕ್ ಅದಾಲತ್
ಶಿಗ್ಗಾವಿ : ಬರುವ ಫೆ. 11 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ನ್ಯಾಯಾಲಯದಲ್ಲಿ ಅಥವಾ ವ್ಯಾಜ್ಯಪೂರ್ವ ಹಂತದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಅಥವಾ ರಾಜಿ ಮಾಡಿಕೊಳ್ಳಲು ಕಕ್ಷಿದಾರರಿಗೆ ಇದೊಂದು ವೇದಿಕೆಯಾಗಿದೆ ಎಂದು ಹಿರಿಯ ದಿವಾಣಿ ವ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಫೈರೋಜಾ ಹ ಉಕ್ಕಲಿ ಹೇಳಿದರು.
ಪಟ್ಟಣದ ಹಿರಿಯ ದಿವಾಣಿ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ಆದೇಶದ ಮೇರೆಗೆ ಫೆ. 11 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಿವಿಲ್ ವ್ಯಾಜ್ಯಗಳು, ಕ್ರಿಮಿನಲ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಹಾಗೂ ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣಗಳನ್ನು ಅಲ್ಲದೇ ರಾಜೀ ಮೂಲಕ ಬಗೆಹರಿಸಿಕೊಳ್ಳಬಲ್ಲ ದಾವೆಗಳು ಇದ್ದಲ್ಲಿ, ಅಂತಹ ಪ್ರಕರಣಗಳನ್ನು ಸಹ ಈ ಅದಾಲತ್ ಕಾರ್ಯಕ್ರಮದಲ್ಲಿ ಬಗೆಹರಿಸಿಕೊಳ್ಳಬಹುದು ಇದರ ಸದುಪಯೋಗವನ್ನು ಪಡೆದುಕೊಂಡು ಬೇಗನೆ ನ್ಯಾಯ ಪಡೆಯಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಿರಿಯ ದಿವಾಣಿ ನ್ಯಾಯಾಧೀಶರಾದ ಶ್ರೀಮತಿ ನಶೃತ್ ಮುಕ್ತಾರಹ್ಮದ್ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.