ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ: ತಾ.ಪಂ ಸಭೆ ಮುಂದೂಡಿಕೆ
ಶಿರಹಟ್ಟಿ 08: ದಿ. 08ರಂದು ಮುಂಜಾನೆ 11 ಘಂಟೆಗೆ ನಡೆಯಬೇಕಿದ್ದ ತಾಲೂಕಾ ಪಂಚಾಯ್ತಿ ಸಾಮಾನ್ಯ ಸಭೆಯ ನಿಮಿತ್ಯ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು ಇಂದು ಬೆಳಗ್ಗೆ ಶಿರಹಟ್ಟಿ ತಾಲೂಕು ಪಂಚಾಯಿತಿಗೆ ಭೇಟಿ ನೀಡಿದಾಗ 28 ಇಲಾಖೆಗಳ ಪೈಕಿ ಕೇವಲ 16 ಇಲಾಖೆ ಅಧಿಕಾರಿಗಳು ಮಾತ್ರ ಕ್ರಿಯಾ ಯೋಜನೆಯ ಮಾಹಿತಿಯನ್ನು ನೀಡಿದ್ದಾರೆ. ಇದರಿಂದಾಗಿ ಸಭೆಯನ್ನು ರದ್ದು ಮಾಡಲಾಗಿದೆ ಎಂದು ತಾಲೂಕಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ನಿಂಗಪ್ಪ ಓಲೇಕಾರ ತಿಳಿಸಿದರು.
ಶಿರಹಟ್ಟಿ ತಾಲೂಕು ಮಟ್ಟದ ಅಧಿಕಾರಿಗಳ ಬೇಜವಾಬ್ದಾರಿತನ ಕಂಡು ಈ ಹಿಂದಿನ ಸಭೆಗಳಲ್ಲಿ ಗೈರಾಗಿದ್ದರಿಂದ ಅವರಿಗೆ ನೋಟಿಸ್ ನೀಡಲಾಗಿದೆ. ಆದರೆ ಜಿಲ್ಲಾಧಿಕಾರಿಯವರು ಯಾವುದೇ ರೀತಿಯ ಕ್ರಮವನ್ನು ತೆಗೆದುಕೊಳ್ಳದೆ ಇರುವುದರಿಂದ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಮುಂದಿನ ಸಭೆ ಒಳಗೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಒ ಡಾ. ನಿಂಗಪ್ಪ ಓಲೇಕಾರ ತಿಳಿಸಿದರು.