27ರಂದು ಲಕ್ಷ್ಮಣ ಸವದಿ ಅಭಿನಂದನಾ ಸಮಾರಂಭ
Felicitation ceremony for Laxman Savadi on the 27th
ಬೆಳಗಾವಿ 25: ರಾಜ್ಯದ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಅಭಿನಂದನಾ ಸಮಾರಂಭವನ್ನು ಬೆಳಗಾವಿ ಜಿಲ್ಲಾ ಬಸವ ಜಯಂತಿ ಉತ್ಸವ ಸಮಿತಿ-2026 ವತಿಯಿಂದ ಸೆ.27ರಂದು ಸಂಜೆ 4 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗಾವಿ ಕಾರಂಜಿ ಮಠದ ಗುರುಸಿದ್ಧ ಮಹಾಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ ಹಾಗೂ ಯಮಕನಮರಡಿಯ ಶೂನ್ಯ ಸಂಪಾದನಾ ಮಠದ ಸದ್ಗುರು ಸಿದ್ದ ಬಸವ ದೇವರು ಉಪಸ್ಥಿತರಿರುವರು.
ಮಾಜಿ ಸಚಿವ ಎ.ಬಿ. ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಸಂಸದೆ ಮಂಗಳಾ ಅಂಗಡಿ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಸವ ಜಯಂತಿ ಉತ್ಸವ ಸಮಿತಿ-2026ರ ಅಧ್ಯಕ್ಷ ಬಸವರಾಜ ರೊಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 