ಡಾ. ಸುರೇಶ ಡಿ. ಹೊರಕೇರಿಗೆ ಸನ್ಮಾನ
ಹುಬ್ಬಳ್ಳಿ 09: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಹುಬ್ಬಳ್ಳಿ ತಾಲೂಕು ಮಟ್ಟದ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಕನಕದಾಸ ಶಿಕ್ಷಣ ಸಮಿತಿಯ ವಿಜಯನಗರ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಎಚ್.ವಿ.ಬೆಳಗಲಿ ಅವರು ಕನ್ನಡದ ಶಾಲು, ಪುಸ್ತಕಗಳನ್ನು ನೀಡಿ ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು.
ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಪ್ರಸಾರಂಗದ ನಿರ್ದೇಶಕ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಉಪಾಧ್ಯಕ್ಷ ಚನಬಸಪ್ಪ ಧಾರವಾಡಶೆಟ್ಟರ, ಜಾನಪದ ವಿದ್ವಾಂಸ ಡಾ. ರಾಮು ಮೂಲಗಿ, ಮೃತ್ಯುಂಜಯ ಮಟ್ಟಿ, ಮಲ್ಲನಗೌಡ ಪಾಟೀಲ, ಮುಂತಾದವರು ಇದ್ದರು.