ತಾಳಿಕೋಟಿ

ನೇತ್ರ ತಜ್ಞ ಡಾ. ಪ್ರಭುಗೌಡ ಲಿಂಗದಳ್ಳಿಗೆ ಸನ್ಮಾನ

ನೇತ್ರ ತಜ್ಞ ಡಾ. ಪ್ರಭುಗೌಡ ಲಿಂಗದಳ್ಳಿಗೆ ಸನ್ಮಾನ

ತಾಳಿಕೋಟಿ: ನಾಡಿನ ಖ್ಯಾತ ನೇತ್ರತಜ್ಞ ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ಕಾಂಗ್ರೇಸ್ ಮುಖಂಡ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ) ಅವರು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಗಾಗಿ ಅವರನ್ನು ಯಾಳವಾರ ಗ್ರಾಮಸ್ಥರು ಗ್ರಾಮದ ವತಿಯಿಂದ ಸನ್ಮಾನಿಸಿ ಗೌರವಿಸಿದರು. 

ಇತ್ತೀಚಿಗೆ ದೇ. ಹಿಪ್ಪರಗಿ ಮತಕ್ಷೇತ್ರದ ಯಾಳವಾರ ಗ್ರಾಮದಲ್ಲಿ ಮನೆ-ಮನೆಗೆ ಆರೋಗ್ಯ ಅಭಿಯಾನದ ಅಡಿಯಲ್ಲಿ ಅನುಗ್ರಹ ವಿಜನ್ ಫೌಂಡೇಶನ್ ಟ್ರಸ್ಟ್‌ ಮತ್ತು ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ವಿಜಯಪೂರ ಇವರ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಅವರಿಗೆ ಗ್ರಾಮಸ್ಥರಿಂದ ಈ ಸನ್ಮಾನ ನೀಡಿ ಗೌರವಿಸಲಾಯಿತು. 

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ) ಅವರು ಗ್ರಾಮೀಣ ಭಾಗದಲ್ಲಿರುವ ಜನರು ಆರ್ಥಿಕ ತೊಂದರೆಯಿಂದಾಗಿ ಆರೋಗ್ಯದ ಗಂಭೀರ ಸಮಸ್ಯೆಗಳಿದ್ದರೂ ನಗರದಲ್ಲಿರುವ ಆಸ್ಪತ್ರೆಗಳಿಗೆ ಬರಲು ಹಿಂಜರಿಯುತ್ತಾರೆ. ಈ ಕಾರಣಕ್ಕಾಗಿ ನಾನೂ ಅವರ ಮನೆಬಾಗಿಲದವರೆಗೆ ತಲುಪಿ ಅವರಲ್ಲಿ ಆರೋಗ್ಯದ ಕುರಿತು ಜಾಗೃತಿಯನ್ನು ಮೂಡಿಸುತ್ತಿದ್ದೇನೆ. ದೇವರು ನನಗೆ ಎಲ್ಲವನ್ನೂ ಕೊಟ್ಟಿದ್ದಾನೆ. ಜನರ ಸೇವೆಯನ್ನು ಮಾಡಬೇಕೆಂಬ ಕಾರಣಕ್ಕಾಗಿ ನಾನು ಈ ಕೆಲಸ ಮಾಡುತ್ತಿದ್ದೇನೆ ಎಂದರು. 

ಯಾಳವಾರ ಗ್ರಾಮದ ಗಣ್ಯರು, ಗ್ರಾ.ಪಂ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅನುಗ್ರಹ ಆಸ್ಪತ್ರೆಯ ಸಿಬ್ಬಂಧಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ