ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪಡೆದ ವೀರಣ್ಣ ಪವಾಡದವರಿಗೆ ಸನ್ಮಾನ
Felicitation for Veeranna Pavadada, recipient of the 'Outstanding Entrepreneur' award
ಗದಗ 16: ಗದಗ ಉತ್ಸವ-2026ಸಮಾರಂಭದಲ್ಲಿ ಶಿಗ್ಲಿ ಗ್ರಾಮದ ಹಿರಿಯ ಉದ್ಯಮಿ ವೀರಣ್ಣ ಪವಾಡದವರಿಗೆ ‘ಶ್ರೇಷ್ಠ ಉದ್ಯಮಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಹಿರೇಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರು ಕೆ. ಲಮಾಣಿ ಅವರು ಶಿಗ್ಲಿ ಗ್ರಾಮದಲ್ಲಿರುವ ವೀರಣ್ಣ ಪವಾಡದವರ ನಿವಾಸಕ್ಕೆ ತೆರಳಿ, ಅವರ ದಂಪತಿಯನ್ನು ಶಾಲು ಹೊದಿಸಿ, ಫಲ-ತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಗ್ರಾಮೀಣ ಭಾಗದಲ್ಲಿ ಉದ್ಯಮ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಹಾಗೂ ಸಮಾಜಮುಖಿ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಶಿಗ್ಲಿ ಗ್ರಾಮದ ಜನತೆಗೆ ಹೆಮ್ಮೆಯ ಸಂಗತಿ ಎಂದರು. ಈ ವೇಳೆ ವೀರಣ್ಣ ಪವಾಡದವರ ಕುಟುಂಬಸ್ಥರು, ಗ್ರಾಮದ ಮುಖಂಡರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 