ಸಾಹಿತ್ಯ, ಪತ್ರಿಕೋದ್ಯಮ, ರಂಗಭೂಮಿ ಮತ್ತು ಸಾಮಾಜಿಕ ಸೇವೆಗೆ ಐದು ದಶಕಗಳ ಸಾಧನೆಗೆ ಸನ್ಮಾನ
Felicitation for five decades of achievement in literature, journalism, theatre, and social service
ಕೊಪ್ಪಳ 24: ಸಾಹಿತ್ಯ, ಪತ್ರಿಕೋದ್ಯಮ, ರಂಗಭೂಮಿ, ಸಿನಿಮಾ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಬಹುಮುಖ ಪ್ರತಿಭೆ ರಮೇಶ್ ಸುರ್ವೆ ಅವರನ್ನು ಜುಲೈ 25ರಂದು ನಡೆಯಲಿರುವ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಗೌರವಿಸಲಾಗುತ್ತಿದೆ.
ಕೊಪ್ಪಳ ಜಿಲ್ಲೆಯ ಪ್ರತಿಭಾವಂತ ಸಾಹಿತಿ ಹಾಗೂ ಹಿರಿಯ ಪತ್ರಕರ್ತರಾಗಿರುವ ರಮೇಶ್ ಸುರ್ವೆ, ನಟನಾಗಿ ತಮ್ಮ ವೃತ್ತಿಜೀವನ ಆರಂಭಿಸಿ ಬಳಿಕ ಪತ್ರಿಕೋದ್ಯಮ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಬೆಂಗಳೂರಿನ ಆದರ್ಶ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ತರಬೇತಿ ಪಡೆದ ಅವರು, ಡಾ. ಶಿವರಾಮ ಕಾರಂತ್, ಗೀರೀಶ್ ಕಾಸರವಳ್ಳಿ, ಪಿ. ಲಂಕೇಶ್ ಹಾಗೂ ಗೀರೀಶ್ ಕಾರ್ನಾಡ್ ಅವರಂತಹ ಗಣ್ಯರ ಮಾರ್ಗದರ್ಶನದಲ್ಲಿ ಬೆಳೆಯುವ ಅವಕಾಶ ಪಡೆದಿದ್ದಾರೆ.
ರಂಗಭೂಮಿಯಲ್ಲಿ ಹಲವು ನಾಟಕ ಸಂಸ್ಥೆಗಳೊಂದಿಗೆ ನಟ ಹಾಗೂ ರಂಗಕರ್ಮಿಯಾಗಿ ಸೇವೆ ಸಲ್ಲಿಸಿರುವ ಅವರು, ನಂತರ ಪತ್ರಕರ್ತ, ಸಂಪಾದಕ, ಲೇಖಕ ಹಾಗೂ ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡರು. ‘ಸುರ್ವೆ ಪತ್ರಿಕೆ’, ‘ಇಂಜಿನಿಯರ್ಸ್ ಡೈರಿ’, ‘ಸುರ್ವೆ ನ್ಯೂಸ್’ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಸಮಾಜಮುಖಿ ಪತ್ರಿಕೋದ್ಯಮ ನಡೆಸಿದ್ದಾರೆ.
ವಿಶ್ವೇಶ್ವರಯ್ಯ ಪ್ರತಿಷ್ಠಾನದ ಮೂಲಕ ರಾಜ್ಯದ ಸುಮಾರು 1.50 ಲಕ್ಷ ಪ್ರತಿಭಾವಂತರಿಗೆ ವೇದಿಕೆ ಕಲ್ಪಿಸಿ, ನೂರಾರು ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರಶಸ್ತಿಗಳನ್ನು ನೀಡುವ ಮೂಲಕ ಅನೇಕ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದ್ದಾರೆ.
ಇದುವರೆಗೆ 500ಕ್ಕೂ ಹೆಚ್ಚು ಸಾಹಿತ್ಯ ಕೃತಿಗಳಿಗೆ ವಿಶ್ವೇಶ್ವರಯ್ಯ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿರುವ ಅವರು, 11 ಮಕ್ಕಳ ಸಾಹಿತ್ಯ ಸಮ್ಮೇಳನ, 12 ಕವಿ ಸಮ್ಮೇಳನ, 10 ರಾಷ್ಟ್ರೀಯ ನಾಟಕೋತ್ಸವ, 75ಕ್ಕೂ ಹೆಚ್ಚು ಕಲಾ ಉತ್ಸವ ಹಾಗೂ 150ಕ್ಕೂ ಹೆಚ್ಚು ವಿಚಾರ ಸಂಕಿರಣಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದಾರೆ.
ರಮೇಶ್ ಸುರ್ವೆ ಅವರು 16ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು, ಗೀತರಚನೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನ ಕ್ಷೇತ್ರಗಳಲ್ಲಿಯೂ ಸೇವೆ ಸಲ್ಲಿಸಿದ್ದಾರೆ. 2008ರಲ್ಲಿ ಬಿಡುಗಡೆಯಾದ ‘ಮಂದಾಕಿನಿ’ ಚಿತ್ರದ ಕಥೆ, ಚಿತ್ರಕಥೆ, ಸಾಹಿತ್ಯ ಹಾಗೂ ನಿರ್ದೇಶನದ ಜವಾಬ್ದಾರಿಯನ್ನು ನಿರ್ವಹಿಸಿದ್ದರು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ 51 ವರ್ಷ ಹಾಗೂ ಸಂಪಾದಕರಾಗಿ 41 ವರ್ಷಗಳ ಸೇವೆ ಸಲ್ಲಿಸಿರುವ ಅವರು, ನಾಲ್ಕು ಸಾವಿರಕ್ಕೂ ಹೆಚ್ಚು ಸಮಾಜಮುಖಿ ಲೇಖನಗಳನ್ನು ಪ್ರಕಟಿಸಿದ್ದಾರೆ. ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಸಮಾಜ ಸೇವೆಗಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಅನೇಕ ಪ್ರಶಸ್ತಿ-ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.
ಜುಲೈ 25ರಂದು ಸಂಜೆ 6 ಗಂಟೆಗೆ ನಡೆಯಲಿರುವ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ರಮೇಶ್ ಸುರ್ವೆ ಅವರನ್ನು ಸನ್ಮಾನಿಸಲಾಗುವುದು. ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಅವರ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಈ ಗೌರವ ಪ್ರದಾನ ಮಾಡಲಾಗುತ್ತಿದೆ.
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ 