ಇಂಡಿ

ಅಧಿಕಾರಿ ರವಿಕಾಂತಗೆ ಸನ್ಮಾನ

ಅಧಿಕಾರಿ ರವಿಕಾಂತಗೆ ಸನ್ಮಾನ

ಇಂಡಿ: ಇತ್ತೀಚೆಗೆ ವಿಜಯಪುರದಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸರ್ವ ಸಾಧಾರಣ ಸಭೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಸಹಕಾರಿ ಸಂಘಗಳ ವಿಭಾಗದಲ್ಲಿ ತಾಲೂಕಿನ ಅಹಿರಸಂಗ ಗ್ರಾಮದ ಭೂದೇವಿ ಕಬ್ಬು ಬೆಳೆಯುವವರ ಸಹಕಾರಿ ಸಂಘ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪ್ರಯುಕ್ತ ವಿಡಿಸಿಸಿ ಬ್ಯಾಂಕ್ ವತಿಯಿಂದ ಪ್ರಶಸ್ತಿಪತ್ರ ಹಾಗೂ 10 ಸಾವಿರ ರೂಪಾಯಿ ನಗದು ನೀಡಿ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ, ಕಾರ್ಯನಿರ್ವಾಹಕ ಅಧಿಕಾರಿ ರವಿಕಾಂತ ಬಿರಾದಾರ ಅವರನ್ನು ಸತ್ಕರಿಸಲಾಯಿತು. 

ಈ ಸಂದರ್ಭದಲ್ಲಿ ವಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ, ಜಿಲ್ಲಾಧಿಕಾರಿ ಮಹಾಂತೇಶ ಧಾನಮ್ಮನವರ, ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ, ನಿರ್ದೇಶಕಿ ಸಂಯುಕ್ತಾ ಪಾಟೀಲ ಸೇರಿದಂತೆ ಮತ್ತಿತರರು ಇದ್ದರು. 

ಸುದ್ದಿ ಓದಿ