ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಬಡದಾನಿಗೆ ಗೌರವ ಸತ್ಕಾರ

ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಬಡದಾನಿಗೆ ಗೌರವ ಸತ್ಕಾರ  Felicitation for the new Block Education Officer, Badadani


ತಾಳಿಕೋಟಿ 23 : ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೂತನವಾಗಿ ಪದಗ್ರಹಣ ಮಾಡಿರುವ ಎಂ.ಎಸ್‌. ಬಡದಾನಿ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಆರಿ​‍್ಬ. ದಮ್ಮೂರಮಠ ಅವರನ್ನು ತಾಳಿಕೋಟಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶುಕ್ರವಾರ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಬಿಇಒ ಎಂ.ಎಸ್‌. ಬಡದಾನಿ, ಕ್ಷೇತ್ರದ ಎಲ್ಲ ಶಾಲೆಗಳು ಇನ್ನಷ್ಟು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಶಿಕ್ಷಕರ ಸಹಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ. ವಜ್ಜಲ್, ಉಪಾಧ್ಯಕ್ಷ ಟಿ.ಹೆಚ್‌. ಲಮಾಣಿ, ಪ್ರಧಾನ ಕಾರ್ಯದರ್ಶಿ ಎಸ್‌.ಬಿ. ಬೀರಗೊಂಡ ಸೇರಿದಂತೆ ಸಂಘದ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.