ಸನ್ಮಾನದಿಂದ ಸಮಾಜಸೇವೆಯ ಜವಾಬ್ದಾರಿ ಹೆಚ್ಚುತ್ತದೆ: ಮೀನಾಕ್ಷಿ ಬಣ್ಣದ ಭಾವಿ
Felicitation increases the responsibility of social service: Meenakshi Bannada Bhavi
ಕೊಪ್ಪಳ, ಆ. 29: ಸಾಮಾಜಿಕ ಕ್ಷೇತ್ರದಲ್ಲಿ ಜನರ ಒಳಿತಿಗಾಗಿ ಕೈಗೊಳ್ಳುವ ಉತ್ತಮ ಕಾರ್ಯಗಳಿಗೆ ದೊರೆಯುವ ಸನ್ಮಾನವು ಸೇವಾ ಕಾರ್ಯದ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮೀನಾಕ್ಷಿ ಬಣ್ಣದ ಭಾವಿ ಹೇಳಿದರು.
ನಗರದ ಸಾಹಿತ್ಯ ಭವನದಲ್ಲಿ ನಿನ್ನೆ ಆಯೋಜಿಸಿದ್ದ ‘ಗೀತ್ ಮತ್ತು ಗಜಲ್ ಸುಮಧುರ ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅವರು, ಕಾರ್ಯಕ್ರಮದ ಸಂಘಟಕರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ತಮಗೆ ದೊರೆತ ಸನ್ಮಾನದಿಂದ ತಮ್ಮ ಮೇಲಿನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಕ್ಲಬ್ನ ಹಿರಿಯರ ಮಾರ್ಗದರ್ಶನದಲ್ಲಿ ಅಧ್ಯಕ್ಷರ ಅವಧಿಯಲ್ಲಿ ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಪ್ರಾಮಾಣಿಕವಾಗಿ ಕೈಗೊಳ್ಳುವುದಾಗಿ ಅವರು ಹೇಳಿದರು.
ಸಮಾಜದ ಒಳಿತಿಗಾಗಿ ನಡೆಯುವ ಇಂತಹ ಉತ್ತಮ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹ ನೀಡುವುದಾಗಿ ಮೀನಾಕ್ಷಿ ಬಣ್ಣದ ಭಾವಿ ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜುಂದಾರ್, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನೀರೀಕ್ಷಕ ಎಂ. ಬದಿಯುದ್ದೀನ್ ಅಹ್ಮದ್ ನವೀದ್ ಹಾಗೂ ಹಿರಿಯ ಪತ್ರಕರ್ತ ಎಂ. ಸಾಧಿಕ್ ಅಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 