ಯರಗಟ್ಟಿ

ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ

ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ


ಯರಗಟ್ಟಿ 01: ಮಹಿಳೆಯರು ಸಾಹಿತ್ಯ, ಸಂಗೀತ, ಉದ್ಯಮ, ಪೊಲೀಸ್ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಪುರುಷರಿಗೆ ಸಮಾನವಾಗಿ ಸಾಧನೆ ಮಾಡುತ್ತಿದ್ದಾರೆ ಎಂದು ತಾಲೂಕು ಬಿಜೆಪಿ ಮಹಿಳಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೈತ್ರಾ ಹೊಂಗಲ ಹೇಳಿದರು. ತಲ್ಲೂರು ಗ್ರಾಮದ ಹಾದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಕ್ಕಳಿಗೆ ಹಣ್ಣು-ಹಂಪಲು ವಿತರಿಸಿ ಮಾತನಾಡಿದ ಮೈತ್ರಾ ಹೊಂಗಲ, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಹಾಗೂ ಜನಪರ ಯೋಜನೆಗಳಿಂದ ಭಾರತ ಜಾಗತಿಕ ಮಟ್ಟದಲ್ಲಿ ಸದೃಢವಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಜಯಶ್ರೀ ಗಾಣಿಗೇರ್, ಸಂಘದ ಮಾಜಿ ಅಧ್ಯಕ್ಷೆ ಕಸ್ತೂರಿ ಹೊಸೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. 


ಸುದ್ದಿ ಓದಿ