ತಾಳಿಕೋಟಿ

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ


ತಾಳಿಕೋಟೆ, 23: ತಾಲೂಕಿನ ಬಿ. ಸಾಲವಾಡಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ವಿಜಯಪುರ ಜಿಲ್ಲಾ ಮಟ್ಟದ ಪ್ರೌಢಶಾಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.  

2024ರಲ್ಲಿ ಎಂ. ಚಿಮ್ಮಲಗಿ, 2025ರಲ್ಲಿ ಪ್ರಭುಗೌಡ ನಾನಾಗೌಡ ರಾರಡ್ಡಿ ಹಾಗೂ 2026ರಲ್ಲಿ ಅಪ್ಪಾಸಾಹೇಬ ಮಲ್ಲನಗೌಡ ಮೂಲಿಮನಿ ಅವರು ವಿಜಯಪುರ ಜಿಲ್ಲಾ ಮಟ್ಟದ ಪ್ರೌಢಶಾಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದರು.  

ಪ್ರಶಸ್ತಿ ಪುರಸ್ಕೃತರಾದ ಮೂವರನ್ನೂ ಬಿ. ಸಾಲವಾಡಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಎಸ್ಡಿಎಂಸಿ ಸದಸ್ಯರು ಸೇರಿ ಸನ್ಮಾನಿಸಿ ಗೌರವಿಸಿದರು.  ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಎಸ್ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು. 


ಸುದ್ದಿ ಓದಿ