ಸಹಕಾರ ಸಚಿವ ಲಕ್ಷ್ಮಣ ಸವದಿಗೆ ಸನ್ಮಾನ
Felicitation of Cooperation Minister Laxman Savadi
ಲೋಕದರ್ಶನ ವರದಿ
ಮಾಂಜರಿ 25: ರಾಜ್ಯದ ಸಹಕಾರ ಸಚಿವರಾಗಿ ಇತ್ತೀಚೆಗೆ ಜವಾಬ್ದಾರಿ ವಹಿಸಿಕೊಂಡಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರನ್ನು ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ವತಿಯಿಂದ ಸನ್ಮಾನಿಸಲಾಯಿತು.
ಸಹಕಾರ ಕ್ಷೇತ್ರದಲ್ಲಿನ ವಿವಿಧ ಸಮಸ್ಯೆಗಳು ಹಾಗೂ ಸಕ್ಕರೆ ಉದ್ಯಮ ಎದುರಿಸುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ ಸವದಿ ಅವರಿಗೆ ಸಹಕಾರ ಖಾತೆಯ ಮಹತ್ವದ ಜವಾಬ್ದಾರಿ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆ ಆಡಳಿತ ಮಂಡಳಿಯ ವತಿಯಿಂದ ಸಚಿವ ಸವದಿ ಅವರನ್ನು ಅಭಿನಂದಿಸಿ, ಶಾಲು, ಶ್ರೀಫಲ ಹಾಗೂ ಪುಷ್ಪಹಾರ ನೀಡಿ ಸನ್ಮಾನಿಸಲಾಯಿತು.
ಸಹಕಾರ ಕ್ಷೇತ್ರದ ಸಂಸ್ಥೆಗಳನ್ನು ಮತ್ತಷ್ಟು ಬಲಪಡಿಸುವುದು, ರೈತರು ಹಾಗೂ ಸದಸ್ಯರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುವುದು ಮತ್ತು ಸಕ್ಕರೆ ಉದ್ಯಮದ ಅಭಿವೃದ್ಧಿಗೆ ಪರಿಣಾಮಕಾರಿ ನೀತಿಗಳನ್ನು ರೂಪಿಸುವ ನೀರೀಕ್ಷೆಯನ್ನು ವ್ಯಕ್ತಪಡಿಸಲಾಯಿತು.
ಸಹಕಾರ ಸಂಸ್ಥೆಗಳ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ ರೈತರ ಹಾಗೂ ಸದಸ್ಯರ ಹಿತಕ್ಕೆ ಆದ್ಯತೆ ನೀಡಿ, ಸಕ್ಕರೆ ಉದ್ಯಮದ ಅಭಿವೃದ್ಧಿಗೆ ಸಚಿವ ಲಕ್ಷ್ಮಣ ಸವದಿ ಅವರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನು ಉಪಸ್ಥಿತರು ವ್ಯಕ್ತಪಡಿಸಿದರು.
ಕಾರ್ಖಾನೆಯ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ, ಉಪಾಧ್ಯಕ್ಷ ತಾತ್ಯಾಸಾಹೇಬ ಕಾಟೆ, ನಿರ್ದೇಶಕರಾದ ಭರತೇಶ ಬಣವಣೆ, ಪರಸಗೌಡ ಪಾಟೀಲ, ಚೇತನ ಪಾಟೀಲ, ಶೇಖರಗೌಡ ಪಾಟೀಲ, ಅಣ್ಣಾಸಾಹೇಬ ಇಂಗಳೆ, ಮಲ್ಲಪ್ಪ ಮೈಶಾಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 