ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
Felicitation of Meritorious Students
ಲೋಕದರ್ಶನ ವರದಿ
ಯಮಕನಮರಡಿ 25: ಸಮೀಪದ ಇಂದ್ರಾನಗರದ ಪ್ರಿಯದರ್ಶಿನಿ ಗಣಪತಿ ಉತ್ಸವ ಮಂಡಳಿ ವತಿಯಿಂದ ಎಲ್ಕೆಜಿಯಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ 50 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮ ಗುರುವಾರ, 24ರಂದು ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮಕ್ಕೆ ಯಮಕನಮರಡಿ ಪೊಲೀಸ್ ಠಾಣೆಯ ಸಿಪಿಐ ಜಾವೀದ್ ಮುಸಾಪುರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪ್ರಿಯದರ್ಶಿನಿ ಉತ್ಸವ ಮಂಡಳಿಯ ಯುವಕ ಮಿತ್ರರು ಕೈಗೊಂಡಿರುವ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಹಾಗೂ ಉತ್ತಮ ಮಾರ್ಗದರ್ಶನ ನೀಡಲು ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಂಡಳಿಯ ಸರ್ವ ಸದಸ್ಯರು, ಗ್ರಾಮದ ವಿದ್ಯಾರ್ಥಿಗಳು, ಮಹಿಳಾ ಪ್ರತಿನಿಧಿಗಳು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು. ಸಿಪಿಐ ಜಾವೀದ್ ಮುಸಾಪುರಿ ಅವರನ್ನು ಮಂಡಳಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಉತ್ಸವ ಮಂಡಳಿಗೆ ದೇಣಿಗೆ ನೀಡಿದವರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 