ಎಸ್‌ಐಆರ್ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಸ್ವಯಂಸೇವಕರಿಗೆ ಸನ್ಮಾನ
Felicitation of volunteers who rendered excellent service in SIR activities
ತಾಳಿಕೋಟೆ ಸೆ.11: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಅವರು ಎಸ್‌ಐಆರ್ ಕಾರ್ಯದಲ್ಲಿ ಸ್ವಯಂಸೇವಕರಾಗಿ ಎರಡು ತಿಂಗಳ ಕಾಲ ನಿರಂತರವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಸ್ವಯಂಸೇವಕರನ್ನು ಸನ್ಮಾನಿಸಿ ಗೌರವಿಸಿದರು.
ಪಟ್ಟಣದ ಹಳೆ ತರಕಾರಿ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ತರಕಾರಿ ಮಾರುಕಟ್ಟೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಸ್ವಯಂಸೇವಕರಿಗೆ ಸನ್ಮಾನ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ನಾಡಗೌಡ, ಎರಡು ತಿಂಗಳ ಕಾಲ ನಿರಂತರವಾಗಿ ಎಸ್‌ಐಆರ್ ಕಾರ್ಯ ನಿರ್ವಹಿಸಿದ ಸ್ವಯಂಸೇವಕರ ಸೇವೆಯನ್ನು ಶ್ಲಾಘಿಸಿ, ಅಭಿನಂದನೆ ಸಲ್ಲಿಸಿದರು.
ಮುಸ್ಲಿಂ ಧಾರ್ಮಿಕ ಮುಖಂಡ ಸಯ್ಯದ್ ಶಕೀಲ್ ಅಹ್ಮದ್ ಖಾಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ಚೋರಗಸ್ತಿ, ಪಕ್ಷದ ಹಿರಿಯ ನಾಯಕರಾದ ಬಿ.ಎಸ್. ಪಾಟೀಲ ಯಾಳಗಿ, ಎಂ.ಜಿ. ಪಾಟೀಲ, ಸಿದ್ದನಗೌಡ ಪಾಟೀಲ ನಾವದಗಿ, ಪ್ರಭುಗೌಡ ಮದರಕಲ್ಲ, ಎಂ.ಎ. ಮೇತ್ರಿ, ಶಿವರಾಜ ಗುಂಡಕನಾಳ, ರೋಷನ್ ಡೋಣಿ, ಮೊದಿನಸಾ ನಗಾರ್ಚಿ, ಹುಸೇನ್ ಪಟೇಲ್, ಡಾ. ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಅಧ್ಯಕ್ಷ ಮೊಹಮ್ಮದ್ ಶಫೀಕ್ ಇನಾಮದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 