ಡಾ. ಪ್ರಭಾಕರ ಕೋರೆಗೆ ವಿ.ಸೋಮಣ್ಣರಿಂದ ಸನ್ಮಾನ
Felicitation to Dr. Prabhakar Kore
ಬೆಳಗಾವಿ 07: ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರು ಡಾ.ಪ್ರಭಾಕರ ಕೋರೆಯವರ ಸ್ವಗೃಹಕ್ಕೆ ಆಗಮಿಸಿ ಸತ್ಕರಿಸಿದರು. ಭಾರತ ಸರಕಾರ ಪ್ರತಿಷ್ಠಿತ ನಾಗರಿಕ ಸನ್ಮಾನವಾದ ಪದ್ಮಶ್ರೀ ಪ್ರಶಸ್ತಿಗೆ ಪುರಸ್ಕೃತರಾದ ಡಾ. ಪ್ರಭಾಕರ ಕೋರೆವರಿಗೆ ವಿ.ಸೋಮಣ್ಣ ಅವರು ಶಾಲು ಹೊದಿಸಿ ಸತ್ಕರಿಸಿ ಅಭಿನಂದಿಸಿದರು.
ಕುಶಲೋಪಹರಿ ವಿಚಾರಿಸಿದ ವಿ.ಸೋಮಣ್ಣ ಅವರು ಶಿಕ್ಷಣ, ಕೃಷಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಡಾ.ಪ್ರಭಾಕರ ಕೋರೆಯವರು ಕೊಡುಗೆ ಅಪಾರವಾದುದು. ಅವರ ಸಮಾಜಮುಖಿಯಾದ ಸೇವೆ, ಧಾರ್ಮಿಕವಾದ ಮನಸ್ಸು ಅವರನ್ನು ಎತ್ತರಕ್ಕೆ ಬೆಳೆಸಿದೆ. ಕೆಎಲ್‌ಇ ಸಂಸ್ಥೆಯನ್ನು ಜಾಗತಿಕವಾಗಿ ವಿಸ್ತರಿಸಿದ ಅವರು ಸಮಾಜ ಸೇವೆಯನ್ನು ಒಂದು ವ್ರತವನ್ನಾಗಿಸಿ ಸ್ವೀಕರಿಸಿ ಶ್ರಮಿಸಿದ್ದಾರೆ. ಇಂದಿನ ಯುವಶಕ್ತಿಗೆ ಒಂದು ರೋಲ್ ಮಾಡೆಲ್ ಆಗಿರುವ ಡಾ.ಕೋರೆಯವರು ಈ ಶತಮಾನ ಕಂಡ ಅಭೂತಪೂವ ವ್ಯಕ್ತಿ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕೆಎಲ್‌ಇ ಸಂಸ್ಥೆಯ ನಿರ್ದೇಶಕರಾದ ಮಹಾಂತೇಶ ಕವಟಗಿಮಠ, ಮಾಜಿ ಸಂಸದ ರಮೇಶ ಕತ್ತಿ ಮೊದಲಾದವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 