ಯಲ್ಲಮ್ಮ ದೇವಸ್ಥಾನದ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರಾದ ಶಾಸಕ ವಿಶ್ವಾಸ್ ವೈದ್ಯರವರಿಗೆ ಸನ್ಮಾನ
Felicitation to MLA Vishwas Vaidya
ಉಗರಗೋಳ 27: ಯಲ್ಲಮ್ಮ ದೇವಸ್ಥಾನದ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರಾಗಿ ನೇಮಕಗೊಂಡ ಶಾಸಕ ವಿಶ್ವಾಸ್ ವೈದ್ಯ ಅವರನ್ನು ಶನಿವಾರ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ. ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ನಿರ್ಧೇಶಕ ಶಿದ್ದನಗೌಡ ಗೋಡ್ರಾಸಿ ಶಾಲೂಹೊದಿಸಿ ಸತ್ಕರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಕ್ಷೆತ್ರ ಯಲ್ಲಮ್ಮನಗುಡ್ಡದ ಅಭಿವೃದ್ದಿಗಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು, ಮುಜರಾಯಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶದಲ್ಲಿ ಉತ್ತಮವಾಗಿ ಕೆಲಸ ಮಾಡಿ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ದಿಗೆ ಪ್ರಯತ್ನಿಸುತ್ತೆನೆ ಎಂದರು. ಚಂದ್ರು ಶಾಮನವರ, ನಾಗರತ್ನಾ ಚೋಳಿನ, ರೇಣುಕಾ ಶಿಂತ್ರಿ, ಬಿ ಎನ್ ಮುದಗೌಡ್ರ, ಅಲ್ಲಮಪ್ರಭು ಪ್ರಭುನವರ, ಆರ್ ಎಚ್ ಸವದತ್ತಿ, ಸಿ ಎನ್ ಕುಲಕರ್ಣಿ, ಏಕನಗೌಡ ಮುದ್ದನಗೌಡ್ರ, ಕೆಂಚನಗೌಡ ರೆಣ್ಕೀಗೌಡ್ರ, ಬಸವರಾಜ ಆಯಟ್ಟಿ, ಪಂಡಿತ ಯಡೂರಯ್ಯ, ಉಗರಗೋಳದ ಪೊಲೇಶಿ, ಪ್ರವೀಣ ರಾಮಪ್ಪನವರ, ಆನಂದ ಮುದ್ರಗಣಿ ಹಾಗೂ ದೆವಸ್ಥಾನ ಸಿಬ್ಬಂದಿ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 