ಸಂಸದೆ ಪ್ರಿಯಾಂಕ ಜಾರಕಿಹೊಳಿಗೆ ಸನ್ಮಾನ
ಶಿಗ್ಗಾವಿ 14: ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದ ಕ್ಯಾಲಕೊಂಡ ಗ್ರಾಮದ ಕಾಂಗ್ರೆಸ ಪಕ್ಷದ ಮುಖಂಡ ಹಾಗೂ ಪರಿಶಿಷ್ಟ ಪಂಗಡದ ರಾಜ್ಯ ಪ್ರಧಾನ ಕಾರ್ಯದರ್ಶಿ ದಿ ಪ್ರಕಾಶ ಹಾದಿಮನಿಯವರ ಮನೆಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ಯುವ ಮುಖಂಡ ರಾಹುಲ ಜಾರಕಿಹೊಳಿ ಭೇಟಿ ನೀಡಿ ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕ ಜಾರಕಿಹೊಳಿಯವರಿಗೆ ಬಸವಣ್ಣವರ ಭಾವಚಿತ್ರವನ್ನು ತಾಲೂಕ ಕಾಂಗ್ರೆಸ ವಕ್ತಾರ ಮಂಜುನಾಥ ಮಣ್ಣಣ್ಣವರ ನೀಡಿ ಹಾರೈಸಿದರು. ಈ ಸಂದರ್ಭದಲ್ಲಿ ಎಸ್.ಟಿ. ಘಟಕದ ಮುಖಂಡ ಅಶೋಕ ಓಲೇಕಾರ, ದುರಗಪ್ಪ ವಡ್ಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.