ಮನೆ ಬಾಗಿಲಿಗೆ ಹೋಗಿ ಹಿರಿಯ ಪತ್ರಕರ್ತ ಜಯಚಂದ್ರನ್ ಅವರಿಗೆ ಸನ್ಮಾನ
Felicitation to senior journalist Jayachandran
ಕಾರವಾರ 7 : ದಾಂಡೇಲಿಯ ರೋಟರಿ ಕ್ಲಬ್ ವತಿಯಿಂದ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರಾದ ಎನ್.ಜಯಚಂದ್ರನ್ ಅವರನ್ನು ಪತ್ರಿಕಾ ದಿನಾಚರಣೆಯ ಅಂಗವಾಗಿ ಅವರ ಮನೆಯಲ್ಲಿ ಸೋಮವಾರ ಸನ್ಮಾನಿಸಲಾಯಿತು.
ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ ಕುಮಾರ ರಾಯ್ ಮತ್ತು ನಿಕಟಪೂರ್ವ ರೋಟರಿ ಕ್ಲಬ್ ಅಧ್ಯಕ್ಷರಾದ ರಾಹುಲ್ ಬಾವಾಜಿ ಗೌರವಪೂರ್ವಕವಾಗಿ ಸನ್ಮಾನಿಸಿ, ಅಭಿನಂದಿಸಿದರು.ನಿಷ್ಠುರ ಮತ್ತು ಪ್ರಾಮಾಣಿಕ ಪತ್ರಕರ್ತರಾಗಿ ಹೆಸರುವಾಸಿಯಾಗಿರುವ ಎನ್. ಜಯಚಂದ್ರನ್ ದಾಂಡೇಲಿ ನಗರಸಭೆಯ ಹಗರಣಗಳ ಬಗ್ಗೆ ಸರಣಿ ವರದಿ ಪ್ರಕಟಿಸಿ, ಜಿಲ್ಲಾಡಳಿತದ ಗಮನ ಸೆಳೆದಿದ್ದರು.
ಪರಿಣಾಮಕಾರಿ ವರದಿಗಾರಿಕೆ ಹೆಸರುವಾಸಿಯಾಗಿರುವ ಪತ್ರಕರ್ತ ಜಯಚಂದ್ರನ್ ವೇದಿಕೆ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರನ್ನು ರೋಟರಿ ಕ್ಲಬ್ ನವರು , ಮನೆಗೆ ತೆರಳಿ ಸನ್ಮಾನಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 