ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೆಳಗಾವಿ : ಎರಡು ಗುಂಪಿನ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಘಟನೆ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿರುವ ವಿಡಿಯೋ ಒಂದು ವೈರಲ್ ಆಗಿದೆ.
ಲಕ್ಷ್ಮಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಹಣಕಾಸಿನ ವಿಚಾರದಲ್ಲಿ ಗಲಾಟೆ ಆರಂಭಗೊಂಡಿದ್ದು, ಬಳಿಕ ಎರಡು ಗುಂಪಿನವರು ಕೈಯಲ್ಲಿ ಕಬ್ಬಿಣದ ರಾಡ್, ಮಚ್ಚು ಹಿಡಿದು ಪರಸ್ಪರ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಹೊಡೆದಾಟದ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿವೆ. ಘಟನೆಯಲ್ಲಿ ವರುಣ್ (16) ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಈ ಘಟನೆಯು ಗೋಕಾಕ್ ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.