ಬಳ್ಳಾರಿ

ಎಸ್ಟಿ- ಎಸ್ಟಿ ಮೀಸಲಾತಿ ಹೆಚ್ಚಳ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿ : ಬಿ ಜಯರಾಮ್ ಒತ್ತಾಯ

ಎಸ್ಟಿ- ಎಸ್ಟಿ ಮೀಸಲಾತಿ ಹೆಚ್ಚಳ   ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿ :  ಬಿ ಜಯರಾಮ್ ಒತ್ತಾಯ

ಬಳ್ಳಾರಿ, ಅ.14:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಎದುರಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ, ಅರ್ಹ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪ್ರಯತ್ನ  ನಡೆಸಬೇಕು. ಅವರು  ಬುಧವಾರ ನಗರದ ಪತ್ರಿಕೆಭಾವನದ ಸುದ್ದಿಗೊಷ್ಟಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡ ಕ್ರಮಗಳು ಹಾಗೂ 2023ರ ಜನವರಿ 15ರಂದು ಹೊರಡಿಸಲಾದ ರಾಜ್ಯಪತ್ರದ ಕುರಿತು ಮಾತನಾಡಿದ ಅವರು, ಮೀಸಲಾತಿ ಹೆಚ್ಚಳದ ನಿರ್ಧಾರವು ಈ ಸಮುದಾಯಗಳ ಬಹುದಿನಗಳ ಹೋರಾಟದ ಫಲವಾಗಿದೆ  .ಮೀಸಲಾತಿ ಹೆಚ್ಚಳದ ಕುರಿತು ಕಾನೂನುಬದ್ಧತೆ ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಹಲವು ವರ್ಷಗಳಿಂದ ಈ ವಿಚಾರ ಕಾನೂನು ಪ್ರಕ್ರಿಯೆಯಲ್ಲಿದೆ. ಮೀಸಲಾತಿ ಹೆಚ್ಚಳದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಹೆಚ್ಚಿನ ಅವಕಾಶಗಳು ದೊರೆಯುವ ನೀರೀಕ್ಷೆ ಇತ್ತು. ಆದರೆ, ನ್ಯಾಯಾಲಯದ ಆದೇಶದಿಂದಾಗಿ ನೇಮಕಾತಿ ಪ್ರಕ್ರಿಯೆ ಮತ್ತು ಅಭ್ಯರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಆತಂಕವನ್ನು ವ್ಯಕ್ತಪಡಿಸಿದರು.ಈಗಾಗಲೇ ಮೀಸಲಾತಿ ಹೆಚ್ಚಳದ ಆಧಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳಲ್ಲಿ ಅವಕಾಶ ಪಡೆದಿದ್ದ ಅಭ್ಯರ್ಥಿಗಳು, ವಿಶೇಷವಾಗಿ ಶಿಕ್ಷಕ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿಯಲ್ಲಿ ಭಾಗವಹಿಸಿದ್ದವರು, ಈಗ ಅನಿಶ್ಚಿತತೆಯನ್ನು ಎದುರಿಸುವಂತಾಗಿದೆ. ಹಲವು ವರ್ಷಗಳ ಕಾಲ ವಿದ್ಯಾಭ್ಯಾಸ ಮಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉದ್ಯೋಗದ ನೀರೀಕ್ಷೆಯಲ್ಲಿದ್ದ ಅಭ್ಯರ್ಥಿಗಳು ನೇಮಕಾತಿ ರದ್ದತಿ ಅಥವಾ ಬದಲಾವಣೆಗಳಿಂದ ತೊಂದರೆ ಅನುಭವಿಸುವಂತಾಗಬಾರದು. ಅವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕಾನೂನುಬದ್ಧ ಪರಿಹಾರ ಕಂಡುಕೊಳ್ಳಬೇಕು ಎಂದು ಜಯರಾಮ್ ಅವರು ಹೇಳಿದರು.ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಜಾರಿಗೊಳಿಸುವುದರ ಜೊತೆಗೆ, ಅದರ ಅನುಷ್ಠಾನಕ್ಕೆ ಸಂಬಂಧಿಸಿದ ಕಾನೂನು ತೊಡಕುಗಳನ್ನು ನಿವಾರಿಸುವ ಜವಾಬ್ದಾರಿಯೂ ಸರ್ಕಾರದ ಮೇಲಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ತನ್ನ ವಾದ ಮಂಡಿಸಬೇಕು. ಅಗತ್ಯವಿದ್ದಲ್ಲಿ ಮೇಲ್ಮನವಿ ಸಲ್ಲಿಸಿ, ಮೀಸಲಾತಿಯ ಪ್ರಯೋಜನದಿಂದ ವಂಚಿತರಾಗುವ ಪರಿಸ್ಥಿತಿ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಸಂವಿಧಾನಬದ್ಧ ಪರಿಹಾರಕ್ಕೆ ಸರ್ಕಾರ ಮುಂದಾಗಲಿಮೀಸಲಾತಿ ವಿಚಾರವನ್ನು ಕೇವಲ ರಾಜಕೀಯ ವಿಷಯವಾಗಿ ನೋಡದೆ, ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳ ದೃಷ್ಟಿಯಿಂದ ಪರಿಗಣಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಅಭಿವೃದ್ಧಿಯಲ್ಲಿ ಸಮಾನ ಅವಕಾಶಗಳು ದೊರೆಯುವುದು ಸಂವಿಧಾನದ ಆಶಯವಾಗಿದೆ. .ಈ ಸಂದರ್ಭದಲ್ಲಿ ಮುದಿಮಲಯ್ಯ, ಡಿ ಎಸ್ ಎಸ್ ರಾಜ್ಯ ಸಂಚಾಲಕರದ ಎ ಮಾನಯ್ಯ ಎಲ್ ಮಾರೆಣ್ಣ, ಪೃಥ್ವಿರಾಜ್, ಜಗನ್ನಾಥ್, ತಳವಾರ್ ದುರುಗಪ್ಪ, ಬಿ ರುದ್ರ​‍್ಪ ಸತ್ಯನಾರಾಯಣ ಚಳಗುರ್ಕಿ ಕುಬೇರ ಕಾಯಿ ಗಡ್ಡೆ ಬಸವರಾಜ್, ಸೇರಿದಂತೆ ಹಲವು ಮುಖಂಡರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು. 


ಸುದ್ದಿ ಓದಿ