ಚಿಕ್ಕೋಡಿ

ಸ್ವ-ಸಹಾಯ ಸಂಘಗಳಿಗೆ ಆರ್ಥಿಕ ನೆರವು: ಗಣೇಶ ಹುಕ್ಕೇರಿ

ಸ್ವ-ಸಹಾಯ ಸಂಘಗಳಿಗೆ ಆರ್ಥಿಕ ನೆರವು: ಗಣೇಶ ಹುಕ್ಕೇರಿ

ಚಿಕ್ಕೋಡಿ 04: ಚಿಕ್ಕೋಡಿ-ಸದಲಗಾ ಕ್ಷೇತ್ರ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಆರ್ಥಿಕವಾಗಿ ಪ್ರಗತಿ ಸಾಧಿಸಲು ಕ್ಷೇತ್ರದ ಎಲ್ಲ ಮಹಿಳಾ ಸ್ವಸಹಾಯ ಸಂಘಗಳಿಗೆ ಶೀಘ್ರವದಲ್ಲಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. 

ತಾಲೂಕಿನ ಶಿರಗಾಂವಾಡಿ ಗ್ರಾಮದಲ್ಲಿ 1.95 ಕೋಟಿ ರೂ ವೆಚ್ಚದ ಎರಡು ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಚಿಕ್ಕೋಡಿ-ಸದಲಗಾ ಕ್ಷೇತ್ರದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಮೊದಲಿನಿಂದಲೂ ರಾಜ್ಯ ಸರ್ಕಾರ ಆರ್ಥಿಕ ಸಹಾಯ ಮಾಡುತ್ತಾ ಬಂದಿದೆ. ಈ ಬಾರಿಯೂ ಕೂಡಾ ಕ್ಷೇತ್ರದ ಪ್ರತಿಯೊಂದು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸ್ವಸಹಾಯ ಸಂಘಗಳಿಗೆ ತಲಾ 1 ಕೋಟಿ ರೂ ಸಹಾಯಧನ ನೀಡಲಾಗುತ್ತದೆ ಎಂದರು. 

ಕಾಂಗ್ರೆಸ್ ಹಿರಿಯ ನಾಯಕರು ಮತ್ತು ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಸುಮಾರು 4 ಕೋಟಿ ರೂ ಅಧಿಕ ಸಹಾಯಧನ ನೀಡಲಾಗುತ್ತದೆ. ಮುಂಬರುವ ದಿನಗಳಲ್ಲಿ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಿ ಮಹಿಳೆಯರಿಗೆ ಆರ್ಥಿಕ ಸಹಾಯ ಮಾಡಲಾಗುತ್ತದೆ. ಮಹಿಳೆಯರು ಹಪ್ಪಳ, ಶಾವಿಗೆ ಮತ್ತು ಹೊಲಿಗೆ ಯಂತ್ರದ ಮೂಲಕ ಬಟ್ಟೆ ಹೊಲೆಯುವ ಕೆಲಸ ಮಾಡಿ ಕುಟುಂಬ ನಿರ್ವಹಣೆ ಮಾಡಲು ಅನುಕೂಲವಾಗುತ್ತದೆ ಎಂದರು. 

ಶಿರಗಾಂವಾಡಿ ಗ್ರಾಮದಿಂದ ನಾಗರಾಳ ಗ್ರಾಮದವರಿಗೆ ಹದಗೆಟ್ಟಿರುವ ರಸ್ತೆ ಕಾಮಗಾರಿಗೆ ಅನುದಾನ ಕೊಡಬೇಕೆಂದು ಗ್ರಾಮಸ್ಥರು ಬೇಡಿಕೆಗೆ ನೀರಾವರಿ ಇಲಾಖೆಯಿಂದ 95 ಲಕ್ಷ ರೂ ಅನುದಾನ ಮಂಜೂರು ಮಾಡಲಾಗಿದೆ. ಅದರಂತೆ ಇಚಲಕರಂಜಿ ರಸ್ತೆಯಿಂದ ತಪಕರವಾಡಿ ರಸ್ತೆಯವರಿಗೆ ರಸ್ತೆ ನಿರ್ಮಿಸಲು 1 ಕೋಟಿ ರೂ ಅನುದಾನ ಮಂಜೂರು ಮಾಡಲಾಗಿದೆ. ಗ್ರಾಮಸ್ಥರು ಮುಂದೆ ನಿಂತು ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದರು. 

ಚಿಕ್ಕೋಡಿ-ಸದಲಗಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ನಾನು ಮತ್ತು ಹಿರಿಯರಾದ ಪ್ರಕಾಶ ಹುಕ್ಕೇರಿ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ಏನೆ ಸಮಸ್ಯೆ ಇದ್ದರೂ ನೇರವಾಗಿ ನಮಗೆ ತಿಳಿಸಿದರೆ ತಕ್ಷಣಾ ಸ್ಪಂಧಿಸುವ ಕಾರ್ಯ ಮಾಡುತ್ತೇವೆ ಎಂದರು. 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೈಗುನ ತಹಶೀಲ್ದಾರ, ಉಪಾಧ್ಯಕ್ಷ ಭೀಮಾ ಉದಗಟ್ಟಿ, ರೋಹಿಣಿ ಹರಗಾಪೂರೆ, ಬಾಬು ಲಾಟಕರ, ದುರೀಣ ಕಿರಣ ಪಾಟೀಲ, ಅನಿಲ ವಿಭೂತಿ, ಚಿದಾನಂದ ಹರಗಾಪೂರೆ, ರಾಯಪ್ಪ ಬನ್ನೆ, ಶಂಕರ ಮಲಕಾಪೂರೆ, ಪಪ್ಪು ಪಾಟೀಲ, ಬಸವರಾಜ ಬಾಬನ್ನವರ ಸೇರಿದಂತೆ ಮುಂತಾದವರು ಇದ್ದರು. 


ಸುದ್ದಿ ಓದಿ