ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮ
ಬಳ್ಳಾರಿ 14: ಬಳ್ಳಾರಿ ವಲಯದ ಪ್ರಾದೇಶಿಕ ಅಗ್ನಿ ಶಾಮಕ ಠಾಣೆಯ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಏ. 14ರಿಂದ ಏ.20ರವರಗೆ ನಡೆಯುವ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮವು ಅಗ್ನಿ ಶಾಮಕ ಠಾಣೆಯ ಕಚೇರಿಯಲ್ಲಿ ಬುಧವಾರ ನಡೆಯಿತು.
ಹುತಾತ್ಮರಾದ ಅಗ್ನಿಶಾಮಕ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಮೌನಾಚರಣೆ ಮಾಡುವ ಮೂಲಕ ಗೌರವ ವಂದನೆಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ವಲಯದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ, ನೀವೃತ್ತ ಅಗ್ನಿ ಶಾಮಕ ಅಧಿಕಾರಿಗಳಾದ ಓಬಣ್ಣ, ಎಸ್.ರಮೇಶ ಮತ್ತು ಬಳ್ಳಾರಿ ಅಗ್ನಿ ಶಾಮಕ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸೇರಿದಂತೆ ಇತರರು ಇದ್ದರು.