ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ, ಸಿಬ್ಬಂದಿ ಪಾರು .
ಕಾರವಾರ, ಮೇ 8: ಭಾರತೀಯ ನೌಕಾಪಡೆಯ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಶನಿವಾರ ಮುಂಜಾನೆ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಆದರೆ ಸುದೈವ ವಶಾತ್ ಸಿಬ್ಬಂದಿ ಮತ್ತು ಹಡಗಿಗೆ ಯಾವುದೇ ಹಾನಿಯಾಗಿಲ್ಲಎಂದು ಅಧಿಕೃತ ಮೂಲಗಳು ಹೇಳಿವೆ.
ವಿಮಾನದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ನೌಕಾಪಡೆಯ ಸಿಬ್ಬಂದಿ ಅದನ್ನು ಕೆಳಗಿಳಿಸಿದರು. ಆದರೂ ಈ ಘಟನೆ ಕೆಲ ಕಾಲ ಆತಂಕ ಮೂಡಿಸಿತ್ತು ಆದರೆ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದೂ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.
ಯುದ್ಧ ನೌಕೆಯ ನಾವಿಕರು ವಸತಿ ಹೊಂದಿರುವ ಭಾಗದಿಂದ ಹೊಗೆ ಬರುತ್ತಿದ್ದನ್ನು ಕರ್ತವ್ಯ ನಿರತ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಯುದ್ಧ ನೌಕೆಯಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಯಾವುದೇ ದೊಡ್ಡ ಪ್ರಮಾಣದ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದೂ ಹೇಳಿಕೆಯಲ್ಲಿ ತಿಳಿಸಲಾಗಿದೆ.