ಅಮದಳ್ಳಿಯಲ್ಲಿ ಅಗ್ನಿ ಅವಘಡ: ಎರಡು ಕಾರ್, ಆಟೋ ಭಸ್ಮ
Fire accident in Amadalli: Two cars, auto gutted
ಕಾರವಾರ 16: ಕಾರವಾರ ತಾಲೂಕಿನ ಅಮದಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಎರಡು ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಸಂಪೂರ್ಣವಾಗಿ ಸುಟ್ಟು ಹೋಗಿವೆ.
ಘಟನೆಯಲ್ಲಿ ಅಗ್ನಿಯ ಕೆನ್ನಾಲಿಗೆಗೆ ವಾಹನಗಳು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದ್ದು, ಕಾರುಗಳು ಹಾಗೂ ರಿಕ್ಷಾ ಸಂಪೂರ್ಣ ನಾಶವಾಗಿವೆ. ಈ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸುಫ್ರೀನ್ ಫರ್ನಾಂಡಿಸ್ ಹಾಗೂ ಥಾಮಸ್ ಫರ್ನಾಂಡಿಸ್ ಅವರಿಗೆ ಸೇರಿದ ಕಾರ್ ಗಳು ಆಹುತಿಯಾಗಿವೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಕುರಿತು ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 