ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಅಹಮದಾಬಾದ್, ಡಿಸೆಂಬರ್ 9: ಗುಜರಾತಿನ ರಾಸಾಯನಿಕ ಕಾರ್ಖಾನೆಯಲ್ಲಿ
ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು,ಸದ್ಯಕ್ಕೆ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ.
ಅಹಮದಾಬಾದಿನ ವತ್ವಾ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳಕ್ಕೆ 20 ಕ್ಕೂ ಹೆಚ್ಚು ಅಗ್ನಿ ಶಾಮಕ ಯಂತ್ರಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ ಆದರೆ ಬೆಂಕಿ ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ .