ಯುಕೋ ಬ್ಯಾಂಕ್ ನಲ್ಲಿ ಅಗ್ನಿ ಅವಗಢ: ರಕ್ಷಣಾ ಕಾರ್ಯಚರಣೆ ಪ್ರಗತಿಯಲ್ಲಿ
ಬೆಂಗಳೂರು, ಸೆ 18 ನಗರದ ಎಂ ಜಿ ರಸ್ತೆಯಲ್ಲಿರುವ ಯೂಕೋ ಬ್ಯಾಂಕ್ ನಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಏಣಿ ಮೂಲಕ ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಮಧ್ಯಾಹ್ನ 2.30ರ ಸುಮಾರಿಗೆ ಯುಕೋ ಬ್ಯಾಂಕ್ ನ ಎರಡನೇ ಮಹಡಿಯಲ್ಲಿ ಭಾರಿ ಅಗ್ನಿ ಕಾಣಿಸಿಕೊಂಡ ಪರಿಣಾಮ ಸಿಬ್ಬಂದಿ ಹಾಗೂ ನಾಗರಿಕರು ಭಯಭೀತಗೊಂಡಿದ್ದಾರೆ. ಶಾಟರ್್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಈಗಾಗಲೇ ಸ್ಥಳಕ್ಕೆ 5 ಅಗ್ನಿ ಶಾಮಕ ವಾಹನಗಳು ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎರಡನೇ ಮಹಡಿಯಲ್ಲಿದ್ದ ಜನರು ಭಯಬೀತರಾಗಿ ಹೊರಗೆ ಓಡಿ ಬಂದಿದ್ದಾರೆ. ಮೂರನೇ ಹಾಗೂ ನಾಲ್ಕನೇ ಮಹಡಿಯಲ್ಲಿದ್ದ ಸಿಬ್ಬಂದಿ ಹಾಗೂ ಜನರು ಕಟ್ಟಡದ ತಾರಸಿಗೆ ದೌಡಾಯಿಸಿ, ರಕ್ಷಣೆಗೆ ಮೊರೆ ಇಟ್ಟಿದ್ದಾರೆ.
ಸದ್ಯ ಅಗ್ನಿ ಶಾಮಕ ಸಿಬ್ಬಂದಿ, ಹಲಸೂರು ಪೊಲೀಸ್ ಠಾಣಾ ಸಿಬ್ಬಂದಿ ಹಾಗೂ ಸ್ಥಳೀಯರು ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 