ಕೋಲ್ಕತಾ, ಆಗಸ್ಟ್ 25 ಉತ್ತರ ಕೊಲ್ಕತ್ತಾದ ದಟ್ಟವಾದ ಜನಸಂಖ್ಯೆಯ ಕೋಸಿಪೋರ್ ಪ್ರದೇಶದಲ್ಲಿ ಮಧ್ಯಮ ಗಾತ್ರದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಾರ್ಖಾನೆ ಬೆಂಕಿಗಾಹುತಿಯಾಗಿದೆ. 12 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತಂದಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ಲಾಸ್ಟಿಕ್ ಕಾಖರ್ಾನೆಗಳಿಗೆ ಬೇಕಾಬಿಟ್ಟಿ ಪರವಾನಗಿಗಳನ್ನು ನೀಡುವ ಮೂಲಕ ಅಧಿಕಾರಿಗಳು ಜನರ ಸುರಕ್ಷತೆಯನ್ನು ಕಡೆಗಣಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.