ರಾಯಬಾಗ

ಬೆಲ್ಲ ತಯಾರಿಕಾ ಘಟಕಕ್ಕೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಬೆಲ್ಲ ತಯಾರಿಕಾ ಘಟಕಕ್ಕೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ


ರಾಯಬಾಗ 20: ತಾಲೂಕಿನ ಜೋಡಟ್ಟಿ ಗ್ರಾಮದ ಅಶೋಕ ಪಾಟೀಲ ಅವರಿಗೆ ಸೇರಿದ ಬೆಲ್ಲ ತಯಾರಿಕಾ ಘಟಕದಲ್ಲಿ ಬುಧವಾರ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಲ್ಲ ತಯಾರಿಕಾ ಉಪಕರಣಗಳು ಹಾಗೂ ದಾಸ್ತಾನು ಮಾಡಲಾಗಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಘಟನೆ ಸಂಭವಿಸುತ್ತಿದ್ದಂತೆ ಘಟಕದಲ್ಲಿದ್ದ ಕೂಲಿ ಕಾರ್ಮಿಕರು ಹೊರಗೆ ಓಡಿ ಬಂದಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಚಿಕ್ಕೋಡಿ ಹಾಗೂ ರಾಯಬಾಗ ತಾಲೂಕಿನ ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಲು ಹರಸಾಹಸಪಟ್ಟರು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. 


ಸುದ್ದಿ ಓದಿ